ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚಿಸಿದ್ದು, ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ ಗ್ರಾಮಗಳನ್ನು ಪಟ್ಟಿ ಮಾಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.