ಪಿರಿಯಾಪಟ್ಟಣ ತಾಲೂಕಿನ ಬೆಟ್ಟದತುಂಗ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಕೇಂದ್ರದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಡೆಂಘೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಮನೆ ಪರಿಸರದಲ್ಲಿ ನೀರು ನಿಲ್ಲುವ ಪಾತ್ರೆಗಳು, ಹಳೆಯ ಟೈರ್‌ಗಳು, ತೆಂಗಿನ ಚಿಪ್ಪುಗಳು ಸೇರಿದಂತೆ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ವಸ್ತುಗಳನ್ನು ತೆರವುಗೊಳಿಸುವ ಮೂಲಕ ಡೆಂಘೆ ತಡೆಗೆ ಸಹಕರಿಸಬೇಕು. ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮೈಕೈ ನೋವು ಹಾಗೂ ಚರ್ಮದ ಮೇಲೆ ಕೆಂಪು ಕಲೆಗಳು ಕಾಣಿಸಿಕೊಂಡರೆ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.