ಮನುಷ್ಯನ ಜೀವನದ ಅವಿಭಾಜ್ಯ ಅಂಗ ಪರಿಸರ

ಜೆಎಸ್‌ಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಉದ್ಘಾಟಿಸಿದರು. ಪ್ರೊ.ಎ.ಜಿ.ದೇವಿಪ್ರಸಾದ್, ಪ್ರೊ.ಮೊರಬದ ಮಲ್ಲಿಕಾರ್ಜುನ,  ರೇಚಣ್ಣ, ಡಾ.ಡಿ.ಎಂ.ಲೋಕೇಶ್ವರಿ ಇನ್ನಿತರರಿದ್ದರು.
ಜೆಎಸ್‌ಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಉದ್ಘಾಟಿಸಿದರು. ಪ್ರೊ.ಎ.ಜಿ.ದೇವಿಪ್ರಸಾದ್, ಪ್ರೊ.ಮೊರಬದ ಮಲ್ಲಿಕಾರ್ಜುನ, ರೇಚಣ್ಣ, ಡಾ.ಡಿ.ಎಂ.ಲೋಕೇಶ್ವರಿ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • *ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಅಭಿಪ್ರಾಯ
ಮೈಸೂರು: ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಸಲ್ಲದು ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ಅನುಷಾ ಹೇಳಿದರು.
ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಪರಿಸರ ವಿಜ್ಞಾನದಲ್ಲಿ ಸುಸ್ಥಿರ ಅಭಿವೃದ್ಧಿ ಕುರಿತು ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಪರಿಸರ ಮನುಷ್ಯನ ಜೀವನದಲ್ಲಿ ಅವಿಭಾಜ್ಯ ಅಂಗವಾಗಿದೆ. ಮನುಷ್ಯನ ಜೀವನಶೈಲಿಯಲ್ಲಿ ಪರಿಸರದ ಗುರುತರ ಪಾತ್ರವಿದೆ. ನಿಸರ್ಗವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಿದಾಗ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಜಿ.ದೇವಿಪ್ರಸಾದ್ ಮಾತನಾಡಿ, ಮನುಷ್ಯರು ನೈಸರ್ಗಿಕ ಸಂಪತ್ತನ್ನು ವಿವೇಕಪೂರ್ವಕವಾಗಿ ಬಳಸಿಕೊಳ್ಳಬೇಕು. ಪ್ರಕೃತಿ ಮಾನವ ಕುಲಕ್ಕೆ ಅಪಾರ ಸೇವೆ ಸಲ್ಲಿಸಿದೆ. ಸಂಪನ್ಮೂಲಗಳು ನಾಶಗೊಳ್ಳದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 
  ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಪರಿಸರ ಸಂರಕ್ಷಣೆ ಮಾಡದಿದ್ದರೆ ಮನುಷ್ಯ ಕುಲ ಕಂಟಕ ಎದುರಿಸಬೇಕಾಗುತ್ತದೆ. ಮಾನವ ತನ್ನ ಸ್ವಾರ್ಥ ಬಿಟ್ಟು ಪರಿಸರದ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕು. ವಿಜ್ಞಾನ ಮತ್ತು ನೈತಿಕತೆಯ ವಾತಾವರಣದಿಂದ ಸಮಾಜದಲ್ಲಿ ಸುಸ್ಥಿರತೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು. 
ಪ್ರಾಂಶುಪಾಲ ಡಾ.ರೇಚಣ್ಣ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಡಿ.ಎಂ.ಲೋಕೇಶ್ವರಿ ಉಪಸ್ಥಿತರಿದ್ದರು.
ಮೈಸೂರು ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಪರಿಸರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ರೂಪಾಂಜಲಿ ಅವರು ’ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲು ಸುಸ್ಥಿರ ತಂತ್ರಗಳು’ ಕುರಿತು ಮಾತನಾಡಿದರು. 
 ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕಿ ಡಾ. ಲತಾಮಣಿ ಅವರು ’ಘನ ತ್ಯಾಜ್ಯ ನಿರ್ವಹಣೆ’ ಕುರಿತು ಉಪನ್ಯಾಸ ನೀಡಿದರು. ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಪರಿಸರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಾದಿರಾಜ್ ಪ್ರಸ್ತುತ ಪರಿಸರದಲ್ಲಿ ಸುಸ್ಥಿರ ಅಭಿವೃದ್ಧಿ’ ಕುರಿತು ಮಾತನಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net