ಯುವ ಸಮೂಹದಿಂದ ಪರಿಸರ ಸಂರಕ್ಷಣೆ ಸಾಧ್ಯ

ನಗರದ ಕುಪ್ಪಣ್ಣ ಪಾರ್ಕ್‌ನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರೊ.ಯು.ಎನ್.ರವಿಕುಮಾರ್ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಪರಶುರಾಮೇಗೌಡ, ಸರಸ್ವತಿ ಇದ್ದರು.
ನಗರದ ಕುಪ್ಪಣ್ಣ ಪಾರ್ಕ್‌ನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರೊ.ಯು.ಎನ್.ರವಿಕುಮಾರ್ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಪರಶುರಾಮೇಗೌಡ, ಸರಸ್ವತಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪರಿಸರವಾದಿ ಪ್ರೊ ಯು.ಎನ್.ರವಿಕುಮಾರ್ ಅಭಿಪ್ರಾಯ
  • ಚಿಣ್ಣರ ಹೆಜ್ಜೆ ಕಾರ್ಯಕ್ರಮ
ಮೈಸೂರು: ಪರಿಸರ ಸಂರಕ್ಷಣೆಯಲ್ಲಿ ಮಕ್ಕಳು ಮತ್ತು ಯುವ ಜನರು ಮುಂಚೂಣಿಯಲ್ಲಿದ್ದರೆ ಮಾತ್ರ ಪರಿಣಾಮಕಾರಿ ಬದಲಾವಣೆ ಸಾಧ್ಯ ಎಂದು ಪರಿಸರವಾದಿ ಪ್ರೊ.ಯು.ಎನ್.ರವಿಕುಮಾರ್ ಹೇಳಿದರು.
ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ವತಿಯಿಂದ ಶನಿವಾರ ನಗರದ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜಿಸಿದ್ದ ಪರಿಸರ ಸ್ನೇಹಿ ಮೈಸೂರಿಗಾಗಿ ಚಿಣ್ಣರ ಹೆಜ್ಜೆ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪರಿಸರವನ್ನು ಹಾನಿಗೊಳಿಸುವಲ್ಲಿ ಮಾನವನ ಪಾತ್ರ ಪ್ರಮುಖವಾಗಿದ್ದು, ಕೇವಲ ಮಾತಿನಲ್ಲಿ ಮಾತ್ರವಲ್ಲದೆ ನಿತ್ಯ ಜೀವನದಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ. ಪ್ರತಿಯೊಬ್ಬರೂ ಕನಿಷ್ಠ ಐದು ಗಿಡಗಳನ್ನು ನೆಟ್ಟರೆ ಅದು ಒಂದು ಕಾಡಿನ ನಿರ್ಮಾಣಕ್ಕೆ ಕಾರಣವಾಗಬಹುದು ಎಂದು ತಿಳಿಸಿದರು.
ಪರಿಸರಕ್ಕಾಗಿ ನಾವು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಮಾತನಾಡಿ, ಅತಿಯಾದ ಪ್ಲಾಸ್ಟಿಕ್ ಬಳಕೆ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ ಎಂದು ಎಚ್ಚರಿಸಿದರು.
ಎಲ್ಲರೂ ಬಟ್ಟೆಯ ಚೀಲಗಳನ್ನು ಬಳಸಬೇಕು ಹಾಗೂ ಮನೆಯಿಂದಲೇ ನೀರಿನ ಬಾಟಲ್ ತೆಗೆದುಕೊಂಡು ಹೋಗುವ ಅಭ್ಯಾಸ ಬೆಳೆಸಿಕೊಳ್ಳಬೇಕು. ತಾವು ಮಾತ್ರ ಜಾಗೃತರಾಗುವುದಕ್ಕಿಂತ ಇತರರಲ್ಲಿಯೂ ಅರಿವು ಮೂಡಿಸುವುದು ಮುಖ್ಯವೆಂದು ಹೇಳಿದರು.
ಸಂಸ್ಥೆಯ ನಿರ್ದೇಶಕಿ ಸರಸ್ವತಿ ಮಾತನಾಡಿ, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಕಳೆದ 40 ವರ್ಷಗಳಿಂದ ಮಕ್ಕಳಾಭಿವೃದ್ಧಿ, ಯುವಕರ ಸಬಲೀಕರಣ, ಮಹಿಳಾಭಿವೃದ್ಧಿ ಹಾಗೂ ಸಮುದಾಯ ಆರೋಗ್ಯ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net