ಸಂವಿಧಾನದಿಂದ ಎಲ್ಲ ವರ್ಗಗಳಿಗೆ ಸಮಾನತೆ

ಮೈಸೂರು ವಿಶ್ವವಿದ್ಯಾಲಯದ ಡಾ.ಬಾಬೂ ಜಗಜೀವನ್ ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ.ಡಿ.ತಿಮ್ಮಯ್ಯ, ಪ್ರೊ.ಕೆ.ಸದಾಶಿವ, ಎಚ್.ಆರ್.ಭೀಮಾಶಂಕರ್ ಇತರರಿದ್ದರು.
ಮೈಸೂರು ವಿಶ್ವವಿದ್ಯಾಲಯದ ಡಾ.ಬಾಬೂ ಜಗಜೀವನ್ ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಡಾ.ಡಿ.ತಿಮ್ಮಯ್ಯ, ಪ್ರೊ.ಕೆ.ಸದಾಶಿವ, ಎಚ್.ಆರ್.ಭೀಮಾಶಂಕರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿಕೆ
ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ನೀಡಿ ಎಲ್ಲ ವರ್ಗಗಳಿಗೆ ಸಮಾನತೆ ತಂದು ಕೊಟ್ಟರು ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿದರು.
ಮೈಸೂರು ವಿಶ್ವವಿದ್ಯಾಲಯದ ಡಾ.ಬಾಬೂ ಜಗಜೀವನ್ ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಭಾರತದ ರಾಜಕಾರಣದಲ್ಲಿ ಬಾಬೂ ಜಗಜೀವನ್ ರಾಮ್ ಅವರ ಕೊಡುಗೆಗಳು ವಿಷಯ ಕುರಿತ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಸ್ವಾತಂತ್ರೃ ನಂತರದ ದಿನಗಳಲ್ಲಿ ಮೀಸಲಾತಿ ನೀಡಿದ್ದರಿಂದ ಧ್ವನಿ ಇಲ್ಲದವರಿಗೆ ಶಕ್ತಿ ದೊರಕಿತು. ಅದೇ ರೀತಿ ಡಿ.ದೇವರಾಜ ಅರಸು ಮುಖ್ಯಮಂತ್ರಿ ಆಗಿದ್ದಾಗ ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿ ನಿಷೇಧ ಮಾಡಿದರು. ಉಳುವವನಿಗೆ ಭೂಮಿ ಹಂಚಿದರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂವತ್ತು ವರ್ಷಗಳ ನಿರಂತರ ಬೇಡಿಕೆಯನ್ನು ಈಡೇರಿಸಿ ಒಳ ಮೀಸಲಾತಿಯನ್ನು ಜಾರಿಗೆ ತಂದ ಕೀರ್ತಿ ಸಲ್ಲುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಬದ್ಧತೆ, ಪ್ರಾಮಾಣಿಕತೆ, ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಂಡು ಜಾರಿಗೆ ತಂದರು. ಇದೊಂದು ಐತಿಹಾಸಿಕ ತೀರ್ಮಾನ ಆಗಿದ್ದರಿಂದ ಇತಿಹಾಸದ ಪುಟದಲ್ಲಿ ಸೇರಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಬಾಬೂಜಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ತಂದೆಯನ್ನು ಕಳೆದುಕೊಳ್ಳುತ್ತಾರೆ. ನಂತರ ಗಾಂಧಿ ಅವರೊಂದಿಗೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಳ್ಳುತ್ತಾರೆ. ರೈಲ್ವೆ ಸಚಿವರಾಗಿ ಸಾಕಷ್ಟು ಕೆಲಸಗಳನ್ನು ಮಾಡಿದರು. ಕಾರ್ಮಿಕ ಸಚಿವರಾಗಿ ಇಎಸ್‌ಐ ಕಾಯ್ದೆಯನ್ನು ಜಾರಿಗೆ ತರುವ ಕೆಲಸ ಮಾಡಿದರು ಎಂದರು.
ಕೇಂದ್ರದ ನಿರ್ದೇಶಕ ಪ್ರೊ.ಕೆ.ಸದಾಶಿವ ಮಾತನಾಡಿದರು. ಸಂದರ್ಶಕ ಪ್ರಾಧ್ಯಾಪಕ ಎಚ್.ಆರ್.ಭೀಮಾಶಂಕರ್, ಡಾ.ಎಂ.ಶ್ರೀನಿವಾಸಮೂರ್ತಿ, ಡಾ.ಆರ್.ಐಶ್ವರ್ಯಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net