ಉನ್ನತ ಹುದ್ದೆಯಲ್ಲಿರುವವರೂ ಸರ್ಕಾರಿ ಶಾಲೆಯವರೇ

ಬನ್ನೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ರೈತ ಸಂಘದ ಹೋಬಳಿ ಅಧ್ಯಕ್ಷ ಹುಚ್ಚೇಗೌಡ ಅಭಿನಂದಿಸಿದರು. ವೈ.ಎಸ್. ರಾಮುಸ್ವಾಮಿ, ರವೀಶ್ ಇತರರು ಇದ್ದರು.
ಬನ್ನೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ರೈತ ಸಂಘದ ಹೋಬಳಿ ಅಧ್ಯಕ್ಷ ಹುಚ್ಚೇಗೌಡ ಅಭಿನಂದಿಸಿದರು. ವೈ.ಎಸ್. ರಾಮುಸ್ವಾಮಿ, ರವೀಶ್ ಇತರರು ಇದ್ದರು.
Published on
ಬನ್ನೂರು: ಸರ್ಕಾರದ ಉನ್ನತ ಹುದ್ದೆಯನ್ನು ನಿರ್ವಹಣೆ ಮಾಡುತ್ತಿರುವ ಬಹುತೇಕರು ಸರ್ಕಾರಿ ಶಾಲೆಯಲ್ಲೇ ಓದಿ ಬಂದವರು. ಸರ್ಕಾರಿ ಶಾಲೆ, ಕಾಲೇಜಿನಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಪಾಲಕರು ಖಾಸಗಿ ಶಾಲೆಯ ವ್ಯಾಮೋಹದಿಂದ ಹೊರಬಂದು ಸರ್ಕಾರಿ ಶಾಲಾ-ಕಾಲೇಜಿಗೆ ಮಕ್ಕಳನ್ನು ದಾಖಲಿಸುವಂತೆ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ವೈ.ಎಸ್. ರಾಮುಸ್ವಾಮಿ ಸಲಹೆ ನೀಡಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿನಿಯರಿಗೆ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಓದುವ ಸಮಯದಲ್ಲಿ ನಿದ್ರೆ ಬಿಡಬೇಕು. ಶ್ರದ್ಧೆ ಇರಬೇಕೆಂದು ಕಿವಿಮಾತು ಹೇಳಿದರು.
ಶ್ರದ್ಧೆಯಿಂದ ಮಾಡಿದ ಕಾರ್ಯಗಳೆಲ್ಲವೂ ಫಲ ನೀಡುತ್ತದೆ. ಶಿಕ್ಷಕರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಿದರೆ ಉತ್ತಮ ಫಲ ದೊರೆಯುತ್ತದೆ ಎನ್ನುವುದನ್ನು ಇಲ್ಲಿನ ಉಪನ್ಯಾಸಕರು ಮಾಡಿ ತೊರಿಸಿದ್ದಾರೆ. ಅವರ ಶ್ರಮದಿಂದ ಇಂದು ಮಕ್ಕಳು ಉತ್ತಮ ಸಾಧನೆ ಮಾಡುವಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಫಲಿತಾಂಶ ದೊರೆಯಲಿ ಎಂದು ಆಶಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಬನ್ನೂರು ಹೋಬಳಿ ಅಧ್ಯಕ್ಷ ಹುಚ್ಚೇಗೌಡ ಮಾತನಾಡಿ, ಇಂದು ಖಾಸಗಿ ಶಾಲೆಯ ವ್ಯಾಮೋಹದಿಂದ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸಿ, ಅಲ್ಲಿಗೆ ಶುಲ್ಕವನ್ನು ಪಾವತಿಸಲಾಗದೆ ಅನೇಕ ತೊಂದರೆಗೆ ಒಳಗಾದ ನಿದರ್ಶನಗಳು ನಮ್ಮ ಕಣ್ಣ ಮುಂದೆ ಇದೆ. ಪಾಲಕರು ಖಾಸಗಿ ಶಾಲೆಯ ವ್ಯಾಮೋಹದಿಂದ ಹೊರಬಂದು ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಿದರೆ ಸರ್ಕಾರಿ ಶಾಲೆಯು ಉಳಿಯುತ್ತದೆ ಎಂದು ತಿಳಿಸಿದರು.
ಇಂದು ಸರ್ಕಾರಿ ಕಾಲೇಜಿನಲ್ಲಿ ಉತ್ತಮ ಫಲಿತಾಂಶ ಪಡೆದುಕೊಳ್ಳುವ ಮೂಲಕ ಬನ್ನೂರಿನ ಕೀರ್ತಿಯನ್ನು ಹೆಚ್ಚಿಸುವಲ್ಲಿ ಇಲ್ಲಿನ ವಿದ್ಯಾರ್ಥಿಗಳು ಶ್ರಮಿಸಿದ್ದಾರೆ. ಅವರು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.
ಕಾಲೇಜಿನ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು. ವೈ.ಎಸ್. ರಾಮುಸ್ವಾಮಿಯವರು ನಗದು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ರವೀಶ್, ಸೀಹಳ್ಳಿ ರಾಜು, ಕಾಲೇಜು ಅಭಿವೃದ್ಧಿ ಸಮಿತಿಯ ರಾಮಲಿಂಗೇಗೌಡ, ಚೆಲುವಮ್ಮ, ಮೊಹಿಸಿನ, ಮುರಳೀಧರ್, ಡಾ. ಮಹದೇವಸ್ವಾಮಿ, ಶ್ರೀನಿವಾಸ, ನಂದೀಶ, ಪರಮೇಶ್, ಶುಭಮಂಗಳ, ವಾಣಿಶ್ರೀ, ಪ್ರಮೀಳಾ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net