ಪಟ್ಟಣದ ಜೆಎಸ್‌ಎಸ್ ಶಿವರಾತ್ರಿ ಶಿವಾನುಭವ ಮಂಗಳ ಮಂಟಪದಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ಜೀವನದಲ್ಲಿ ಶಿಸ್ತು, ಸಂಯಮ, ಸ್ಪರ್ಧಾತ್ಮಕ ಮನೋಭಾವ ಹೆಚ್ಚಿಸುವುದರ ಜತೆಗೆ ಆರೋಗ್ಯಯುತ ಜೀವನಕ್ಕೆ ಸಹಕಾರಿ. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ, ಕ್ರೀಡೆ, ಕಲೆ, ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿಗಳನ್ನು ಬೆಳೆಸಿಕೊಂಡರೆ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.
ಪಶು ಸಂಗೋಪನಾ ಇಲಾಖೆ ಕೋಲಾರ ಉಪ ನಿರ್ದೇಶಕ ವೈ.ಡಿ.ರಾಜಣ್ಣ ಮಾತನಾಡಿ, ತ್ರಿವಿಧ ದಾಸೋಹಕ್ಕೆ ಪ್ರಸಿದ್ಧವಾಗಿರುವ ಜೆಎಸ್‌ಎಸ್ ಸಂಸ್ಥೆ ರಾಜ್ಯ, ಹೊರ ರಾಜ್ಯ ಸೇರಿದಂತೆ ವಿದೇಶಗಳಲ್ಲೂ ಶಿಕ್ಷಣ ಸೇರಿದಂತೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಎಲ್ಲರಿಗೂ ಶಿಕ್ಷಣ ಕೈಗೆಟುವಂತೆ ಮಾಡಿರುವ ಜೆಎಸ್‌ಎಸ್ ಶಿಕ್ಷಣ ದಾಸೋಹಕ್ಕೆ ಒತ್ತು ನೀಡಿದೆ ಎಂದರು.