ನಗರದ ಪ್ರಾದೇಶಿಕ ಕಚೇರಿ ಸಭಾಂಗಣದಲ್ಲಿ ಸೋಮವಾರ ಆರೋಗ್ಯ ಇಲಾಖೆಯ ಮೈಸೂರು ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಉಡುಪಿ ಜಿಲ್ಲೆಯ ಮಾಹಿತಿ ಪ್ರತ್ಯೇಕವಾಗಿ ಪಡೆದುಕೊಂಡರು. ನವಜಾತ ಶಿಶು ಮತ್ತು ತಾಯಂದಿರ ಮರಣ ತಡೆಯಲು ಏಕೆ ವಿಫಲವಾಗಿದೆ? ಎಂದು ಖಾರವಾಗಿ ಪ್ರಶ್ನಿಸಿದರು.