ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲು: ಆರೋಪ

ಸುದ್ದಿಗೋಷ್ಠಿ
ಸುದ್ದಿಗೋಷ್ಠಿ
Published on

ಪ್ರಮುಖ ಮುಖ್ಯಾಂಶಗಳು

  • ಕ್ರಿಮಿನಲ್ ಪ್ರಕರಣ ದಾಖಲಿಸುವ ಮೂಲಕ ಹೋರಾಟ ಹತ್ತಿಕ್ಕುವ ಯತ್ನ
  • ಒಳ ಮೀಸಲಾತಿ ಜಾರಿಗೊಳಿಸಬೇಕು
ಮೈಸೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡರ ಮೇಲೆ ಪೊಲೀಸರು ಬಂಧಿಸಿ ಸುಳ್ಳು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ ಎಂದು ಸಮಿತಿ ಮುಖಂಡ ಎಸ್.ಮಾರೆಪ್ಪ ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿಗೆ ನಮ್ಮ ಸಮಿತಿಯಿಂದ ಡಿ.6ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ಪೊಲೀಸರು 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಮ್ಮನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಯಿತು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಬೇಕು, ಅರೆಕಾಲಿಕ, ಹಂಗಾಮಿ ಉದ್ಯೋಗ ನೇಮಕಾತಿಗಳು ಸೇರಿದಂತೆ ಹೊರ ಗುತ್ತಿಗೆ ಕಾಮಗಾರಿಗಳಲ್ಲೂ ಮೀಸಲಾತಿ ಇದೆ. ಈ ಎಲ್ಲ ಮೀಸಲಾಯಿಯಲ್ಲಿಯೂ ಒಳ ಮೀಸಲಾತಿ ಜಾರಿಗೊಳಿಸಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ ಎಂದರು.
ಎಲ್ಲ ಬೇಡಿಕೆ ಈಡೇರಿಸಬೇಕು, ನಮ್ಮ ಮೇಲೆ ಹಾಕಿಸುವ ಸುಳ್ಳು ಪ್ರಕರಣ ಕೈ ಬಿಡಬೇಕು, ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಡಿ.11ರಂದು ಮಧ್ಯಾಹ್ನ 12ಕ್ಕೆ ನಗರದ ಪುರಭವನ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿದೆ ಎಂದು ಹೇಳಿದರು.
ಮುಖಂಡರಾದ ಶಿವರಾಮು ಅಕ್ಕರಕಿ, ಸಂತೋಷ್, ರಾಜಣ್ಣ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net