ತಾಲೂಕಿನ ರಾಮನಾಥ ತುಂಗಾ ಗ್ರಾಮದ ಸ್ವಾಮಿನಾಯಕ (52) ಮೃತಪಟ್ಟವರು.ಗುರುವಾರ ಗ್ರಾಮದಲ್ಲಿರುವ ಅವರಿಗೆ ಸೇರಿದ ತೆಂಗಿನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿದ್ದು ಕೂಡಲೇ ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸ್ವಾಮಿನಾಯಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಂಜೆ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.