ರೈತ ಸಂಘದಿಂದ ರಸ್ತೆ ಸಂಚಾರ ತಡೆ ನಾಳೆ

 ರೈತ ಸಂಘದ ಜಿಲ್ಲಾಧ್ಯಕ್ಷ ಶಿರಮಳ್ಳಿ ಮಂಜುನಾಥ್
ರೈತ ಸಂಘದ ಜಿಲ್ಲಾಧ್ಯಕ್ಷ ಶಿರಮಳ್ಳಿ ಮಂಜುನಾಥ್
Published on
ನಂಜನಗೂಡು: ತಾಲೂಕಿನ ಮುದ್ದಹಳ್ಳಿ, ಎಲಚಗೆರೆ, ಸಿಂಧುವಳ್ಳಿ ಪುರ ಬಳಿಯ 448 ಎಕರೆ ಫಲವತ್ತಾದ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಕೆಐಎಡಿಬಿ ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯಿಂದ ಏ.6ರಂದು ಗುಂಡ್ಲುಪೇಟೆ- ಊಟಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ  ಶಿರಮಳ್ಳಿ ಮಂಜುನಾಥ್ ತಿಳಿಸಿದ್ದಾರೆ.
ಕೆಐಎಡಿಬಿ ಹಾಗೂ ಸರ್ಕಾರ ನಿಯಮಗಳನ್ನು ಗಾಳಿಗೆ ತೂರಿ ಸಕ್ರಿಯವಾಗಿ ಕೃಷಿಯಲ್ಲಿ ತೊಡಗಿರುವ ರೈತರ ಜಮೀನನ್ನು ಬಲವಂತವಾಗಿ ವಶಪಡಿಸಿಕೊಳ್ಳಲು ಯತ್ನಿಸುತ್ತಿದೆ. ಈ ಭಾಗದ ಬಹುತೇಕ ರೈತರು ಸಣ್ಣ ಹಿಡುವಳಿದಾರರಾಗಿದ್ದಾರೆ. ಅವರನ್ನೆಲ್ಲ ಬಲವಂತವಾಗಿ ದಲ್ಲಾಳಿಗಳು ಆಮಿಷ ಒಡ್ಡಿ ಜಮೀನು ಮಾರಲು ಪ್ರೇರೇಪಿಸುತ್ತಿದ್ದಾರೆ. ಇದರಲ್ಲಿ ಕೆಲವು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕೂಡಲೆ ಸ್ಥಳಿಯ ಶಾಸಕರು ಇದರ ಬಗ್ಗೆ ಗಮನ ಹರಿಸಿ, ರೈತರ ಜಮೀನಿನ ಭೂಸ್ವಾಧೀನ ಪ್ರಕ್ರಿಯೆಯಿಂದ ಹೊರಗಿಡಬೇಕು. ಏ.6 ರಂದು ನಡೆಯುವ ಹೋರಾಟದಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಮಂಜು ಕಿರಣ್, ಮುದ್ದಹಳ್ಳಿ ಹಾಗೂ ಸುತ್ತಮುತ್ತಲಿನ ರೈತರು ಪಾಲ್ಗೊಳ್ಳಲಿದ್ದಾರೆ ಎಂದು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net