

ಕೈಗಾರಿಕಾ ಉದ್ದೇಶಕ್ಕೆ ಮರಸೆ ಹಾಗೂ ಮದರಗಳ್ಳಿ ಗ್ರಾಮದಲ್ಲಿ ಕೆಐಎಡಿಬಿ ಕೈಗೊಳ್ಳಲು ಉದ್ದೇಶಿಸಿರುವ ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡುವಂತೆ ಆಗ್ರಹಿಸಿ ರೈತರು ಶನಿವಾರ ನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ರೈತರ ನಡುವೆ ಕಾವೇರಿದ ವಾಗ್ವಾದ ಸಹ ನಡೆಯಿತು.