ಸೆಸ್ಕ್ ಕಚೇರಿ ಎದುರು ರೈತರಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದಿಂದ  ಪ್ರತಿಭಟನೆ ನಡೆಸಲಾಯಿತು. ಹೊಸೂರು ಕುಮಾರ್, ಮರಂಕಯ್ಯ, ಪೈ.ವೆಂಕಟೇಶ್, ಆನಂದೂರು ಪ್ರಭಾಕರ್, ಮಂಡಕಳ್ಳಿ ಮಹೇಶ್ ಇತರರು ಇದ್ದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಹೊಸೂರು ಕುಮಾರ್, ಮರಂಕಯ್ಯ, ಪೈ.ವೆಂಕಟೇಶ್, ಆನಂದೂರು ಪ್ರಭಾಕರ್, ಮಂಡಕಳ್ಳಿ ಮಹೇಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಿದರೆ ಕಾಡು ಪ್ರಾಣಿಗಳ ಹಾವಳಿಯಿಂದ ಜಮೀನುಗಳಿಗೆ ಹೋಗಲು ಸಾಧ್ಯವಿಲ್ಲ
  • ವಿದ್ಯುತ್ ಅಭಾವದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ನೀರಿಲ್ಲದೇ ಬಹುತೇಕ ಬೆಳೆಗಳು ಹಾಳಾಗುತ್ತಿವೆ
ಮೈಸೂರು: ಹಗಲಿನ ಸಮಯದಲ್ಲಿ ತಡೆ ರಹಿತವಾಗಿ 7 ಗಂಟೆ ತ್ರೀಪೇಸ್ ವಿದ್ಯುತ್ ಸರಬರಾಜು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ವಿಜಯನಗರ ಎರಡನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಸಂಘದ ಪದಾಧಿಕಾರಿಗಳು, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ವಿದ್ಯುತ್ ಅಭಾವದಿಂದ ರೈತರಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ನೀರಿಲ್ಲದೇ ಬಹುತೇಕ ಬೆಳೆಗಳು ಹಾಳಾಗುತ್ತಿವೆ. ಗ್ರಾಮೀಣ ಭಾಗದ ಅನೇಕ ರೈತರು ಕೃಷಿಯನ್ನೇ ಅವಲಂಬಿಸಿದ್ದು, ಬೆಳೆ ನಾಶದಿಂದಾಗಿ ತೊಂದರೆಗೆ ಸಿಲುಕುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಿದರೆ ಕಾಡು ಪ್ರಾಣಿಗಳ ಹಾವಳಿಯಿಂದ ಜಮೀನುಗಳಿಗೆ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಹಗಲಿನ ವೇಳೆಯಲ್ಲಿ ಸರ್ಕಾರದ ಆದೇಶದಿಂದ 7 ಗಂಟೆಗಳು ಅಡಚಣೆ ರಹಿತವಾಗಿ ವಿದ್ಯುತ್ ಪೂರೈಕೆ ಮಾಡಬೇಕಿದೆ. ಅಲ್ಲದೆ ಕೆಟ್ಟು ಹೋಗಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು 24 ಗಂಟೆಯೊಳಗೆ ದುರಸ್ತಿ ಮಾಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಸಲು ಆದ್ಯತೆ ನೀಡುವ ಮೂಲಕ ಈಗಾಗಲೇ ನೋಂದಾಯಿಸಿರುವ ರೈತರಿಗೆ ಹಣ ಪಾವತಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಜೋತು ಬಿದ್ದಿರುವ ವಿದ್ಯುತ್ ಕಂಬಗಳು, ವೈಯರ್‌ಗಳನ್ನು ಕೂಡಲೇ ದುರಸ್ತಿ ಮಾಡಬೇಕು. ಈ ಹಿಂದಿನ ರೀತಿಯಲ್ಲೇ ಕೃಷಿ ಪಂಪ್‌ಸೆಟ್‌ಗಳ ಅಕ್ರಮ-ಸಕ್ರಮಗೊಳಿಸುವ ಮೂಲಕ ಹಿಂದಿನ ಠೇವಣಿ ದರವನ್ನೇ ಮುಂದುವರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್.ಅರ್ಚನಾ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಮನವಿ ಸ್ವೀಕರಿಸಿದರು. ಸೆಸ್ಕ್ ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಸುನೀಲ್, ಮುಖ್ಯ ಇಂಜಿನಿಯರ್ ಎಲ್. ಲೋಕೇಶ್ ಇದ್ದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಮರಂಕಯ್ಯ, ಪೈ.ವೆಂಕಟೇಶ್, ಆನಂದೂರು ಪ್ರಭಾಕರ್, ಮಂಡಕಳ್ಳಿ ಮಹೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net