ಬಿಡದಿಯಲ್ಲಿ ರೈತರ ಮೇಲಿನ ದಬ್ಬಾಳಿಕೆ ಖಂಡಿಸಿ ಮೈಸೂರಿನಲ್ಲಿ ರೈತರ ಪ್ರತಿಭಟನೆ

ಬಿಡದಿ ಬಳಿ ಟೌನ್‌ಶಿಪ್ ನಿರ್ಮಾಣ ವಿರೋಧಿಸಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ನಡೆ ಖಂಡಿಸಿ ನಗರದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ರಸ್ತೆ ಸಂಚಾರ ತಡೆ ನಡೆಸಲಾಯಿತು. ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್, ಲಕ್ಷ್ಮಿಪುರ ವೆಂಕಟೇಶ್, ಚುಂಚುರಾಯನಹುಂಡಿ ನಂಜುಂಡಸ್ವಾಮಿ, ಕಾಟೂರು ನಾಗೇಶ್, ಧನಗಳ್ಳಿ ಕೆಂಡಗಣ್ಣ ಸ್ವಾಮಿ, ಕೂರ್ಗಳ್ಳಿ ರವಿಕುಮಾರ್ ಇತರರು ಇದ್ದರು.
ಬಿಡದಿ ಬಳಿ ಟೌನ್‌ಶಿಪ್ ನಿರ್ಮಾಣ ವಿರೋಧಿಸಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ನಡೆ ಖಂಡಿಸಿ ನಗರದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ರಸ್ತೆ ಸಂಚಾರ ತಡೆ ನಡೆಸಲಾಯಿತು. ಬರಡನಪುರ ನಾಗರಾಜ್, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್, ಲಕ್ಷ್ಮಿಪುರ ವೆಂಕಟೇಶ್, ಚುಂಚುರಾಯನಹುಂಡಿ ನಂಜುಂಡಸ್ವಾಮಿ, ಕಾಟೂರು ನಾಗೇಶ್, ಧನಗಳ್ಳಿ ಕೆಂಡಗಣ್ಣ ಸ್ವಾಮಿ, ಕೂರ್ಗಳ್ಳಿ ರವಿಕುಮಾರ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಟೌನ್‌ಶಿಪ್ ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ
  • ಪ್ರತಿಭಟನಾನಿರತರನ್ನು ಚದುರಿಸುವ ನೆಪದಲ್ಲಿ ಲಾಠಿ ಪ್ರಹಾರ ಮಾಡಿ ವಯೋವೃದ್ಧ, ಮಹಿಳೆಯರ ಮೇಲೂ ದಯೆಯಿಲ್ಲದೆ ಬಲಪ್ರಯೋಗ ನಡೆಸಿದ್ದಾರೆ
ಮೈಸೂರು:ಬಿಡದಿ ಬಳಿ ಟೌನ್‌ಶಿಪ್ ನಿರ್ಮಾಣ ವಿರೋಧಿಸಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ನಡೆ ಖಂಡಿಸಿ ನಗರದಲ್ಲಿ ರೈತ ಸಂಘಟನೆಗಳ ಒಕ್ಕೂಟದಿಂದ ರಸ್ತೆ ಸಂಚಾರ ತಡೆ ಮಾಡಲಾಯಿತು.
ನಂಜನಗೂಡು-ಮೈಸೂರು ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಹೋರಾಟಗಾರರು, ಬಿಡದಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ ಲಾಠಿ ಪ್ರಹಾರ ನಡೆಸಿರುವ ನಡೆ ಖಂಡನೀಯ ಎಂದು ದೂರಿದರು.
ಬಿಡದಿ ಹೋಬಳಿಯ ಬೈರಮಂಗಲ, ಮಂಡಲಹಳ್ಳಿ ಸೇರಿ ವಿವಿಧ ಹಳ್ಳಿಗಳಲ್ಲಿ ಉದ್ದೇಶಿತ ಹೈಟೆಕ್ ಐಟಿ, ಎಐ ಟೌನ್‌ಶಿಪ್ ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ನಡೆ ವಿರೋಧಿಸಿ ಬಿಡದಿ ಭೂ ಸ್ವಾಧೀನ ಹೋರಾಟ ಸಮಿತಿಯ ನೇತೃತ್ವದಲ್ಲಿ 460ಕ್ಕೂ ಹೆಚ್ಚು ದಿನಗಳಿಂದ ನಿರಂತರವಾಗಿ ಶಾಂತಿಯುತ ಸತ್ಯಾಗ್ರಹ ನಡೆಸಲಾಗುತ್ತಿದೆ. ಸೋಮವಾರ ಕಂದಾಯ ಇಲಾಖೆ ಅಧಿಕಾರಿಗಳು ರೈತರ ಅನುಮತಿ ಪಡೆಯದೇ ಏಕಪಕ್ಷೀಯವಾಗಿ ಮಂಡಲಹಳ್ಳಿ ಗ್ರಾಮದಲ್ಲಿ ಭೂ ಸರ್ವೇ ಕಾರ್ಯ ನಡೆಸಲು ಬಂದಿದ್ದರು. ಈ ವೇಳೆ ಮಹಿಳೆಯರು ಮತ್ತು ಹಿರಿಯ ರೈತರು ಸೇರಿದಂತೆ ನೂರಾರು ಹೋರಾಟಗಾರರು ಅಧಿಕಾರಿಗಳ ವಾಹನವನ್ನು ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜಮಾಯಿಸಿದ್ದ ಪೊಲೀಸ್ ಸಿಬ್ಬಂದಿಯು ಪ್ರತಿಭಟನಾನಿರತರನ್ನು ಚದುರಿಸುವ ನೆಪದಲ್ಲಿ ಲಾಠಿ ಪ್ರಹಾರ ಮಾಡಿ ವಯೋವೃದ್ಧ, ಮಹಿಳೆಯರ ಮೇಲೂ ದಯೆಯಿಲ್ಲದೆ ಬಲಪ್ರಯೋಗ ನಡೆಸಿದ್ದಾರೆ. ಪೊಲೀಸರ ಈ ದೌರ್ಜನ್ಯ, ದಬ್ಬಾಳಿಕೆ ಖಂಡನೀಯ. ಹಲವು ರೈತರು ಹಾಗೂ ಮಹಿಳಾ ಪ್ರತಿಭಟನಾಕಾರರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಹೋರಾಟಗಾರರನ್ನು ಬಲವಂತವಾಗಿ ಬಂಧಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿದರು.
ಕೂಡಲೇ ಬಿಡದಿ ಟೌನ್ ಶಿಪ್ ಯೋಜನೆ ಕೈ ಬಿಡಬೇಕು. ಶಾಂತಿಯುತ ಹೋರಾಟವನ್ನು ಲಾಠಿಚಾರ್ಜ್ ಹಂತಕ್ಕೆ ಕೊಂಡೊಯ್ದ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಪ್ರತಿಭಟನಾನಿರತ ರೈತರು, ಮಹಿಳೆಯರ ಮೇಲೆ ಹಾಕಿರುವ ಪ್ರಕರಣವನ್ನು ಕೂಡಲೇ ವಾಪಾಸ್ ಪಡೆಯಬೇಕು. ಬಂಧಿತ ರೈತರ ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದ ಮೈಸೂರು ತಾಲೂಕು ಘಟಕದಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಸಂಘಟನಾ ಕಾರ್ಯದರ್ಶಿ ವರಕೋಡು ನಾಗೇಶ್, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಮುಖಂಡರಾದ ಚುಂಚುರಾಯನಹುಂಡಿ ನಂಜುಂಡಸ್ವಾಮಿ, ಕಾಟೂರು ನಾಗೇಶ್, ಧನಗಳ್ಳಿ ಕೆಂಡಗಣ್ಣ ಸ್ವಾಮಿ, ಕೂರ್ಗಳ್ಳಿ ರವಿಕುಮಾರ್, ವಾಜಮಂಗಲ ಮಹಾದೇವ, ನಾಗೇಂದ್ರ, ಮಾಲಿಂಗ ನಾಯಕ, ಕೇರ್ಗಳ್ಳಿ ಬಾಲು, ಸತೀಶ, ಸೋಮಶೇಖರ್, ಶಿವಣ್ಣ, ಟೀ ಕಾಟೂರು ಪುಟ್ಟಸ್ವಾಮಿ, ಮಿಲ್ಟ್ರಿ ಕುಮಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net