ರೈತರು ತಪ್ಪದೆ ಬೆಳೆ ವಿಮೆ ಮಾಡಿಸಿ

ಬೆಟ್ಟದಪುರ ಸಮೀಪದ ಭುವನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು. ನಿತಿನ್ ವೆಂಕಟೇಶ್, ರಹಮತ್ ಜಾನ್ ಬಾಬು, ನಿಸರ್ಗಪ್ರಿಯ, ಯೋಗಾನಂದ, ಎಚ್.ಆರ್.ದಿನೇಶ್ ಇದ್ದರು.
ಬೆಟ್ಟದಪುರ ಸಮೀಪದ ಭುವನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು. ನಿತಿನ್ ವೆಂಕಟೇಶ್, ರಹಮತ್ ಜಾನ್ ಬಾಬು, ನಿಸರ್ಗಪ್ರಿಯ, ಯೋಗಾನಂದ, ಎಚ್.ಆರ್.ದಿನೇಶ್ ಇದ್ದರು.
Published on
ಬೆಟ್ಟದಪುರ: ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ವೆಂಕಟೇಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಭುವನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನ ಪ್ರತಿ ಗ್ರಾಮವನ್ನು ಅಭಿವೃದ್ಧಿ ಮಾಡುವ ಉದ್ದೇಶ ಹೊಂದಿದ್ದೇನೆ. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಮೂಲಸೌಕರ್ಯಗಳ ಅಭಿವೃದ್ಧಿಗೆ ನಿರಂತರ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.
ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಲಾಗುತ್ತಿದೆ. ಜನರು ಸಲ್ಲಿಸುವ ಮನವಿಗಳನ್ನು ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ರವಾನಿಸಿ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಲಾಗುತ್ತಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಪ್ರಾಮಾಣಿಕ ಸೇವೆ ಸಲ್ಲಿಸುವುದು ನನ್ನ ಗುರಿಯಾಗಿದೆ. ಯಾವುದೇ ಗ್ರಾಮ ಅಭಿವೃದ್ಧಿಯಿಂದ ವಂಚಿತವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಪ್ರಕೃತಿ ವಿಕೋಪ, ಅತಿವೃಷ್ಟಿ ಅಥವಾ ಅನಾವೃಷ್ಟಿಯಿಂದ ಬೆಳೆ ಹಾನಿಯಾದಾಗ ಬೆಳೆ ವಿಮೆಯು ಆರ್ಥಿಕ ರಕ್ಷಣೆಯಾಗಿ ನೆರವಾಗುತ್ತದೆ. ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳು ನೀಡುವ ಸಹಾಯಧನ, ಯೋಜನೆಗಳು, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಮತ್ತು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ್ ಜಾನ್ ಬಾಬು, ತಹಸೀಲ್ದಾರ್ ನಿಸರ್ಗಪ್ರಿಯ, ಲೋಕೋಪಯೋಗಿ ಇಲಾಖೆ ಎಇಇ ಯೋಗಾನಂದ, ಎಇ ಎಚ್.ಆರ್.ದಿನೇಶ್, ನಿರ್ಮಿತಿ ಕೇಂದ್ರದ ಇಂಜಿನಿಯರ್ ರಕ್ಷಿತ್, ಲ್ಯಾಂಡ್ ಆರ್ಮಿ ಇಂಜಿನಿಯರ್‌ಗಳಾದ ವಿಜಯ್, ಸುಗಂಧರಾಜ್, ಜಿಪಂ ಇಂಜಿನಿಯರ್ ಮಲ್ಲಿಕಾರ್ಜುನ, ವಲಯ ಅರಣ್ಯಾಧಿಕಾರಿ ಪದ್ಮಶ್ರೀ, ಬಿಇಒ ರವಿಪ್ರಸನ್ನ, ಸಿಡಿಪಿಒ ವೀಣಾ, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಆಹಾರ ಇಲಾಖೆ ನಿರೀಕ್ಷಕ ಎಂ.ಆರ್.ಮಂಜುನಾಥ್, ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net