ಸರ್ವರ ಸಹಕಾರದಿಂದ ಜಯಂತಿ ಮಹೋತ್ಸವ ಯಶಸ್ವಿ

ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಮಳವಳ್ಳಿಯ ಸಮಿತಿ ಹಾಗೂ ಕಾರ್ಯಕರ್ತರಿಗೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಸೌಮ್ಯನಾಥ ಸ್ವಾಮೀಜಿ, ಡಾ.ಶ್ರೀ ಚನ್ನಬಸವ ಸ್ವಾಮೀಜಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ ಅನ್ನದಾನಿ ಇದ್ದರು.
ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಮಳವಳ್ಳಿಯ ಸಮಿತಿ ಹಾಗೂ ಕಾರ್ಯಕರ್ತರಿಗೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಸೌಮ್ಯನಾಥ ಸ್ವಾಮೀಜಿ, ಡಾ.ಶ್ರೀ ಚನ್ನಬಸವ ಸ್ವಾಮೀಜಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ ಅನ್ನದಾನಿ ಇದ್ದರು.
Published on
ನಂಜನಗೂಡು: ಸರ್ವರ ಸಹಕಾರದಿಂದ ಮಳವಳ್ಳಿಯಲ್ಲಿ ನಡೆದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇ ಜಯಂತಿ ಮಹೋತ್ಸವ ಯಶಸ್ವಿಯಾಗಿದೆ ಎಂದು ಸುತ್ತೂರು ಮಠದ ಪೀಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಸಮಿತಿ ಹಾಗೂ ಕಾರ್ಯಕರ್ತರಿಗೆ ಸುತ್ತೂರು ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಯಂತಿ ಮಹೋತ್ಸವವು ಇತಿಹಾಸದ ಪುಟಗಳಲ್ಲಿ ಸೇರಿದೆ ಎಂದೂ ಮಾತನಾಡಿಸದಂತಹ ರಾಜಕೀಯ ವ್ಯಕ್ತಿಗಳು ಜಯಂತಿ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾಮುಖಿಯಾಗಿ ಮಾತನಾಡಿದ್ದಾರೆ. ಪ್ರತಿದಿನ ಬೆಳಗಿನ ಜಾವದಲ್ಲಿ ನಡೆಯುತ್ತಿದ್ದ ಪ್ರಭಾತ್‌ಪೇರಿ ಕಾರ್ಯಕ್ರಮದಲ್ಲಿ ಬಡಾವಣೆಗಳ ಜನರು ತಮ್ಮ ಮನೆಯ ಕಾರ್ಯಕ್ರಮದಂತೆ ಭಾಗವಹಿಸಿ ಸಂಭ್ರಮಿಸಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ ಎಂದು ತಿಳಿಸಿದರು.
ಕನಕಪುರ ಶ್ರೀ ದೇಗುಲ ಮಠದ ಕಿರಿಯ ಶ್ರೀಗಳಾದ ಡಾ.ಶ್ರೀ ಚನ್ನಬಸವ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬರ ಶ್ರಮದಿಂದ ಮಹೋತ್ಸವ ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ನಡೆದಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಬೆಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ಮಾತನಾಡಿ, ಮನುಕುಲದಲ್ಲಿ ಸಾರ್ಥಕ ಪಡೆಯಬೇಕಾದರೆ ಮಠ ಮಾನ್ಯಗಳ ಸೇವೆ ಅನನ್ಯ. ಜಾತ್ಯತೀತವಾಗಿ ಮಠಗಳು ಸೇವೆ ನೀಡುತ್ತಿವೆ. ಸಂಸ್ಕೃತಿ, ಧಾರ್ಮಿಕತೆ ಉಳಿಸಿ ಬೆಳೆಸುವಲ್ಲಿ ಮಠಗಳ ಪಾತ್ರ ಅತ್ಯಮೂಲ್ಯವಾಗಿವೆ. ಯುವಕರು ಇಂದಿನ ದಿನಗಳಲ್ಲಿ ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಈ ಜಯಂತಿಯ ಮೂಲಕ ಸುತ್ತೂರು ಮಠವು ಮಾನವ ಜನಾಂಗಕ್ಕೆ ಉತ್ತಮ ಸಂದೇಶಗಳನ್ನು ನೀಡುತ್ತಿದೆ ಎಂದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ತಮಗೆ ಹಂಚಿದಂತಹ ಕಾರ್ಯಗಳನ್ನು ಪ್ರಾಮಾಣಿಕತೆ, ಶ್ರದ್ಧೆಯಿಂದ ನಿರ್ವಹಿಸಿದ್ದಾರೆ. ಮಳವಳ್ಳಿ ತಾಲ್ಲೂಕಿನಲ್ಲಿ ಇಂತಹ ಕಾರ್ಯಕ್ರಮಗಳು ಮುಂದೆ ನಡೆಯುತ್ತದೆಯೊ ಗೊತ್ತಿಲ್ಲ ಎಂಬಂತೆ ಬಹಳ ಅಚ್ಚುಕಟ್ಟಾಗಿ ಜರುಗಿದೆ. ಇಂತಹ ಕಾರ್ಯಕ್ರಮಗಳು ನಡೆಯುವುದರಿಂದ, ಜನರಲ್ಲಿ ಹೊಂದಾಣಿಕೆ, ಸಮಾನತೆ, ಸಂಸ್ಕೃತಿ, ಮಾನವೀಯ ಮೌಲ್ಯಗಳು ಬೆಳೆಯುವಲ್ಲಿ ಸಹಕಾರಿಯಾಗಿವೆ ಎಂದರು.
ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಮಾತನಾಡಿ, ಸುತ್ತೂರು ಮಠಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ತಮ್ಮ ಕ್ಷೇತ್ರದಲ್ಲಿ ಮಾತ್ರ ಜಯಂತಿ ಮಹೋತ್ಸವವನ್ನು ಆಚರಿಸಿಕೊಂಡರು ಎಂದು ಜನರು ಹೇಳುತ್ತಿದ್ದರು. ಆದರೆ, ಜಯಂತಿ ಮಹೋತ್ಸವವು ಮಳವಳ್ಳಿಯಲ್ಲಿ ಅದ್ದೂರಿಯಾಗಿ ನಡೆದಿರುವುದು ತುಂಬಾ ಸಂತಸ ಉಂಟು ಮಾಡಿದೆ ಎಂದರು.
ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಕಾರ್ಯಕ್ರಮದ ಯಶಸ್ಸಿನ ಹಿಂದೆ ಬಹಳಷ್ಟು ಜನರ ಪರಿಶ್ರಮವಿದೆ. ಶ್ರೀಗಳ ಸಲಹೆ ಮತ್ತು ಮಾರ್ಗದರ್ಶನದಂತೆ ಅಚ್ಚುಕಟ್ಟಾಗಿ ನಡೆದಿದೆ. ಜಿಲ್ಲೆಯ ಜನರು ನೀರು ಕೇಳಿದರೆ, ಪಾನಕ ಕೊಡುವಂತವರು ಎನ್ನುವಂತೆ ಮಹೋತ್ಸವವನ್ನು ಆಚರಿಸಿ ಸೈ ಎನಿಸಿಕೊಂಡಿದ್ದಾರೆ ಎಂದರು.
ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದರು. ಮಳವಳ್ಳಿ ತಾಲೂಕಿನ ವಿವಿಧ ಮಠಗಳ ಮಠಾಧೀಶರು, ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಜಿಪಂ ಮಾಜಿ ಅಧ್ಯಕ್ಷ ಮರಿಗೌಡ, ಉದ್ಯಮಿ ಎಂ.ಆರ್.ಉಮಾಪತಿ, ಎಸ್.ನಿಶಾಂತ್, ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ, ಎಡಿಜಿಪಿ ನಂಜುಂಡಸ್ವಾಮಿ, ಎಡಿಸಿ ಶಿವಾನಂದಮೂರ್ತಿ, ತಹಸೀಲ್ದಾರ್ ಲೋಕೇಶ್, ಡಾ.ಸಿ.ಸೋಮಶೇಖರ್, ನಾಗರತ್ನಾ, ಪಿ.ಎಂ.ಮಹದೇವಸ್ವಾಮಿ, ಬಿ.ನಿರಂಜನಮೂರ್ತಿ, ಡಾ.ರೇಚಣ್ಣ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಜೆಎಸ್‌ಎಸ್ ಮಹಾವಿದ್ಯಾಪೀಠದ ಅಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net