ಕುರುಚಲು ಹುಲ್ಲಿಗೆ ಬೆಂಕಿ ಹತ್ತಿಕೊಂಡು ಸುಮಾರು 8 ಎಕರೆ ಬೆಂಕಿಗೆ ಆಹುತಿ
ಮೈಸೂರು: ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರಂ ಮುಡಾ ಬಡಾವಣೆ ಬಳಿ ಬೆಂಕಿ ಅನಾಹುತ ಸಂಭವಿಸಿದೆ.
ಕುರುಚಲು ಹುಲ್ಲಿಗೆ ಬೆಂಕಿ ಹತ್ತಿಕೊಂಡಿದ್ದು. ಸುಮಾರು 8 ಎಕರೆ ಬೆಂಕಿಗೆ ಆಹುತಿಯಾಗಿದೆ. ಕಸದ ರಾಶಿಗೆ ಹಾಕಿರುವ ಬೆಂಕಿಯ ಕೆನ್ನಾಲಿಗೆ ಚಾಚಿ ಹೊತ್ತಿ ಉರಿದಿರುವ ಸಾಧ್ಯತೆ ಇದೆ ಎಂಬುದು ತಿಳಿದು ಬಂದಿದೆ.
ಬನ್ನಿಮಂಟಪ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.