ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಂಘದ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಚಿವರಾದ ಕೆ.ವೆಂಕಟೇಶ್, ಶಿವರಾಜ ಎಸ್.ತಂಗಡಗಿ, ಹೋರಾಟಗಾರ ವಾಟಾಳ್ ನಾಗರಾಜು, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಣ್, ಕೆ.ಹರೀಶ್‌ಗೌಡ, ಎಂಎಲ್‌ಸಿಗಳಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಡಾ.ಕೆ.ಶಿವಕುಮಾರ್, ಸಂಘದ ಅಧ್ಯಕ್ಷರೂ ಆದ ಕರ್ನಾಟಕ ರಾಜ್ಯ ಆಡಳಿತ ಸೇವೆಗಳ ಸಂಘದ ಅಧ್ಯಕ್ಷ ಬಿ.ಶಿವಸ್ವಾಮಿ ಸೇರಿ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.