ಜ.11ರಂದು ಫಿಟ್ ಮೈಸೂರು ವಾಕಥಾನ್

ಫಿಟ್ ಮೈಸೂರು ವಾಕಥಾನ್
ಫಿಟ್ ಮೈಸೂರು ವಾಕಥಾನ್
Published on

ಪ್ರಮುಖ ಮುಖ್ಯಾಂಶಗಳು

  • 5 ಕಿ.ಮೀ ವಾಕಥಾನ್‌ನಲ್ಲಿ ಅಂದಾಜು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ
  • ಆರೋಗ್ಯಕರ ಮೈಸೂರು, ಸ್ವಚ್ಛ ಮೈಸೂರು, ಹಸಿರು ಮೈಸೂರು, ಸುರಕ್ಷಿತ ಮೈಸೂರು ಶೀರ್ಷಿಕೆಗಳ ಮೂಲಕವಾಗಿ ಸಾರ್ವಜನಿಕರಲ್ಲಿ ಅರಿವು
 ಮೈಸೂರು: ಮೈಸೂರನ್ನು ಆರೋಗ್ಯಕರ, ಸ್ವಚ್ಛ, ಹಸಿರು ಹಾಗೂ ಸುರಕ್ಷಿತ ನಗರವನ್ನಾಗಿ ರೂಪಿಸುವ ಸಲುವಾಗಿ ಫಿಟ್ ಮೈಸೂರು ವಾಕಥಾನ್ ನಗರದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಜನವರಿ 11ರಂದು ಬೆಳಗ್ಗೆ 6ಕ್ಕೆ ಹಮ್ಮಿಕೊಳ್ಳಲಾಗಿದೆ.
ಮೈಸೂರು ವಿಶ್ವವಿದ್ಯಾಲಯ, ಜಿಎಸ್‌ಎಸ್ ಸಮೂಹ ಸಂಸ್ಥೆಗಳು, ಮೈಸೂರು ಜಿಮ್ ಅಸೋಸಿಯೇಷನ್ ಸಹಯೋಗದೊಂದಿಗೆ ನಡೆಯುವ 5 ಕಿ.ಮೀ ವಾಕಥಾನ್‌ನಲ್ಲಿ ಅಂದಾಜು 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಎನ್.ಲೋಕನಾಥ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರೋಗ್ಯಕರ ಮೈಸೂರು, ಸ್ವಚ್ಛ ಮೈಸೂರು, ಹಸಿರು ಮೈಸೂರು, ಸುರಕ್ಷಿತ ಮೈಸೂರು ಶೀರ್ಷಿಕೆಗಳ ಮೂಲಕವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ವಾಕಥಾನ್ ಯಶಸ್ವಿಗೊಳಿಸಲು ನಾಗರಿಕರ ಸಕ್ರಿಯ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ತಿಳಿಸಿದರು.
ಕುಲಸಚಿವೆ ಎಂ.ಕೆ.ಸವಿತಾ ಮಾತನಾಡಿ, ಮೈಸೂರಿನಲ್ಲಿ ಈಗಾಗಲೇ ಯೋಗ ದಿನಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ. ಅದೇ ರೀತಿಯಲ್ಲಿ ಫಿಟ್ ಮೈಸೂರು ವಾಕಥಾನ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದ್ದು, ಇದಕ್ಕಾಗಿ ಮೈಸೂರು ವಿವಿ ಸಂಪೂರ್ಣ ಸಹಕಾರ ನೀಡಲಿದ್ದು, ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಜತೆಗೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ‘ಫಿಟ್ ಮೈಸೂರು ವಾಕಥಾನ್’ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. ವಾಕಥಾನ್‌ನಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಕ್ಯೂಆರ್ ಕೋಡ್ ಆಧಾರಿತ ನೋಂದಣಿ ಪ್ರಕ್ರಿಯೆಗೂ ಚಾಲನೆ ನೀಡಲಾಯಿತು.
ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಶ್ರೀಹರಿ ದ್ವಾರಕಾನಾಥ್, ಹರ್ಷ, ವಿವೇಕ್, ಶ್ರೀರಾಮ್, ರೂಪಶ್ರೀ, ಸರಳಾ, ಸಿರಿ ಬಾಲು ಇನ್ನಿತರರಿದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net