2018ರ ಜುಲೈ 2ರಂದು ದಾರಿ ಬಿಡುವ ವಿಚಾರವಾಗಿ ಗುಂಪು ಕಟ್ಟಿಕೊಂಡು ಬಂದು ಗಲಾಟೆ
ಬೊಮ್ಮನಾಯಕನ ತಲೆಗೆ ರಾಡ್‌ನಿಂದ ಹಲ್ಲೆ
ಎಚ್.ಡಿ.ಕೋಟೆ ಠಾಣೆಯ ಪೊಲೀಸರಿಂದ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ
ಮೈಸೂರು: ದಾರಿ ಬಿಡುವ ವಿಚಾರವಾಗಿ ಗಲಾಟೆ ಮಾಡಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಐವರಿಗೆ 10 ವರ್ಷ ಸದಾ ಶಿಕ್ಷೆಯನ್ನು ವಿಧಿಸಿ ಹುಣಸೂರಿನ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.
2018ರ ಜುಲೈ 2ರಂದು ದಾರಿ ಬಿಡುವ ವಿಚಾರವಾಗಿ ಗುಂಪು ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದರು. ಅಲ್ಲದೆ, ಬೊಮ್ಮನಾಯಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಬೊಮ್ಮನಾಯಕ ಎಚ್.ಡಿ.ಕೋಟೆ, ಮೈಸೂರಿನ ಕೆ.ಆರ್. ಆಸ್ಪತ್ರೆ ಮತ್ತು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಎಚ್.ಡಿ.ಕೋಟೆ ಠಾಣೆಯ ಪೊಲೀಸರು, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಟಿ.ಗೋವಿಂದಯ್ಯ ಅವರು ಆರೋಪಿತರ ವಿರುದ್ಧ ಆರೋಪ ಸಾಬೀತಾಗಿದ್ದರಿಂದ ಹತ್ತು ವರ್ಷ ಸಾದಾ ಶಿಕ್ಷೆಯೊಂದಿಗೆ 42,500 ರೂ. ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಕೆ.ಎಂ.ಶಿವಶಂಕರಮೂರ್ತಿ ಸರ್ಕಾರದ ಪರ ವಾದ ಮಂಡಿಸಿದ್ದರು.