ಕುಟುಂಬದ ಜತೆಗೆ ಆರೋಗ್ಯಕ್ಕೆ ಒತ್ತು ನೀಡಿ

ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ
ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ
Published on

ಪ್ರಮುಖ ಮುಖ್ಯಾಂಶಗಳು

  • ಡಾ.ಪುಷ್ಪಾ ಅಮರನಾಥ್ ಸಲಹೆ *
  • ಮಹಿಳಾ ದಿನಾಚರಣೆ
ಮೈಸೂರು: ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಗುರುವಾರ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ ಆಯೋಜಿಸಲಾಗಿತ್ತು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ಈ ವರ್ಷದ ಮಹಿಳಾ ದಿನಾಚರಣೆಯು ನ್ಯಾಯ, ಹಕ್ಕುಗಳು ಹಾಗೂ ಕಾರ್ಯಕ್ಷಮತೆ ಎಂಬ ಆಶಯದೊಂದಿಗೆ ನಡೆಯುತ್ತಿದೆ. 
ಮಹಿಳೆಯರು ಕುಟುಂಬದ ಜವಾಬ್ದಾರಿಯ ಜತೆಗೆ ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು. ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಚಟುವಟಿಕೆಗೆ ಪೂರಕವಾಗಿವೆ. ಕ್ರೀಡಾಪಟುಗಳು ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸದಾ ಕ್ರಿಯಾಶೀಲರಾಗಿರಬೇಕು ಎಂದು ಹೇಳಿದರು.
ಮಹಿಳೆಯರಿಗೆ ಬಾಸ್ಕೆಟ್‌ಬಾಲ್, ಶೂಟ್ ಔಟ್, ಹಗ್ಗ ಜಗ್ಗಾಟ, ಮ್ಯೂಸಿಕಲ್ ಚೇರ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಕ್ರೀಡಾ ವಿಭಾಗಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿ.ಸಾನಿಕಾ, ಬಿ.ಎಲ್.ಕುಸುಮಾ, ಲಕ್ಷ್ಮೀ, ರಿಷಾಶ್ರೀ, ಎಚ್.ಎಂ.ಪ್ರೀತಿ, ಸೋನಾಕ್ಷಿ, ಸಿಂಚನಾ, ಕೆ.ಎಂ.ಪ್ರಿಯಾಂಕಾ ಅವರನ್ನು ಸನ್ಮಾನಿಸಲಾಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಜಿಪಂ ಉಪ ಕಾರ್ಯದರ್ಶಿ ಸವಿತಾ, ಮುಖ್ಯ ಲೆಕ್ಕಾಧಿಕಾರಿ ಸಿದ್ದಗಂಗಮ್ಮ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪುಷ್ಪಾ, ಮಾರುಕಟ್ಟೆ ಇಲಾಖೆಯ ಉಪ ನಿರ್ದೇಶಕಿ ಸಂಗೀತಾ, ಸಹಾಯಕ ಪ್ರಾಧ್ಯಾಪಕಿ ನಿರ್ಮಲಾ ದೇವಿ, ಪ್ರಾಧ್ಯಾಪಕಿ ಲಕ್ಷ್ಮೀ ಪಲುಟಿ,  ಜೋಶ್ನಾ ಕಾಮತ್, ಕರಾಟೆ ಪಟು ಭಾರತಿ ಉಪಸ್ಥಿತರಿದ್ದರು.
ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಉದ್ಘಾಟಿಸಿದರು. ಭಾಸ್ಕರ್ ನಾಯಕ್, ಸವಿತಾ, ಸಿದ್ದಗಂಗಮ್ಮ, ಪುಷ್ಪಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net