ಮೈಸೂರಿನಲ್ಲಿ ಮುಂದುವರಿದ ಫುಟ್‌ಪಾತ್ ಒತ್ತುವರಿ ತೆರವು

ಮೈಸೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ವಲಯ ಕಚೇರಿ 6ರ ವ್ಯಾಪ್ತಿಯ ಇರ್ವಿನ್ ರಸ್ತೆಯ ಎರಡು ಬದಿ ಒತ್ತುವರಿ ತೆರವುಗೊಳಿಸಲಾಯಿತು.
ಮೈಸೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ವಲಯ ಕಚೇರಿ 6ರ ವ್ಯಾಪ್ತಿಯ ಇರ್ವಿನ್ ರಸ್ತೆಯ ಎರಡು ಬದಿ ಒತ್ತುವರಿ ತೆರವುಗೊಳಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಇರ್ವಿನ್ ರಸ್ತೆಯ ಎರಡೂ ಬದಿಯ ಒತ್ತುವರಿ ತೆರವು
  • ಪಾದಚಾರಿ ಮಾರ್ಗಗಳ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ಗಳು, ವ್ಯಾಪಾರ ವಸ್ತುಗಳು ಸೇರಿ ವಿವಿಧ ಅತಿಕ್ರಮಣಗಳನ್ನು ತೆರವು
ಮೈಸೂರು:ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ವಲಯ ಕಚೇರಿ 6ರ ವ್ಯಾಪ್ತಿಯ ಹಲವು ಕಡೆ ಒತ್ತುವರಿ ತೆರವುಗೊಳಿಸಲಾಯಿತು.
ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದ್ದ ಆಯುರ್ವೇದಿಕ್ ವೃತ್ತದಿಂದ ಸಬರ್ಬನ್ ಬಸ್ ನಿಲ್ದಾಣವರೆಗೆ ಇರ್ವಿನ್ ರಸ್ತೆಯ ಎರಡೂ ಬದಿಯ ಒತ್ತುವರಿ ತೆರವು ಮಾಡಲಾಯಿತು.
ಈ ಕಾರ್ಯಾಚರಣೆ ಪೂರ್ವಭಾವಿಯಾಗಿ ಮೈಕ್ ಮೂಲಕ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಲಾಗಿತ್ತು. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಹಾಗೂ ಸ್ವಯಂಪ್ರೇರಿತವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು.
ನಿಗದಿತ ಕಾರ್ಯಕ್ರಮದಂತೆ ಪಾಲಿಕೆಯ ವಲಯ-6 ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು. ಪೊಲೀಸ್ ಇಲಾಖೆ ಹಾಗೂ ಪಾಲಿಕೆ ಸಿಬ್ಬಂದಿ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಾದಚಾರಿ ಮಾರ್ಗಗಳ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ಗಳು, ವ್ಯಾಪಾರ ವಸ್ತುಗಳು ಸೇರಿ ವಿವಿಧ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು.
ನಗರದಲ್ಲಿ ಪಾದಚಾರಿಗಳಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net