ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೇವಲ ಮೈಸೂರು ಸಂಸ್ಥಾನದ ಆಡಳಿತಗಾರರಷ್ಟೇ ಅಲ್ಲ. ಆಧುನಿಕ ಕರ್ನಾಟಕದ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕಿದ ದೂರದೃಷ್ಟಿಯ ನಾಯಕರು. ಶಿಕ್ಷಣ, ನೀರಾವರಿ, ಆರೋಗ್ಯ, ವಿದ್ಯುತ್, ಕೈಗಾರಿಕೆ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ಅವರು ಕೈಗೊಂಡ ಕ್ರಮಗಳು ಇಂದಿಗೂ ಮಾದರಿಯಾಗಿವೆ ಎಂದು ಹೇಳಿದರು.