ಬಾಯಿ ಆರೋಗ್ಯಕ್ಕೆ ಆದ್ಯತೆ ನೀಡಿ

ಸರಗೂರು ತಾಲೂಕು ಬಡಗಲಪುರ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಹಾಗೂ ಬಾಯಿ ಆರೋಗ್ಯ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಡಾ.ಸಮೀವುಲ್ಲಾ ಷರೀಫ್, ಪೂರ್ಣಿಮಾ, ವೈದ್ಯಾಧಿಕಾರಿ ಡಾ.ರೋಹನ್ ಇದ್ದರು.
ಸರಗೂರು ತಾಲೂಕು ಬಡಗಲಪುರ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಹಾಗೂ ಬಾಯಿ ಆರೋಗ್ಯ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಡಾ.ಸಮೀವುಲ್ಲಾ ಷರೀಫ್, ಪೂರ್ಣಿಮಾ, ವೈದ್ಯಾಧಿಕಾರಿ ಡಾ.ರೋಹನ್ ಇದ್ದರು.
Published on
ಸರಗೂರು: ದಿನ ನಿತ್ಯ ದೇಹವನ್ನು ಸ್ವಚ್ಛಗೊಳಿಸುವ ಹಾಗೆ ದಂತಗಳನ್ನು ದಿನಕ್ಕೆ ಎರಡು ಬಾರಿ ಸ್ವಚ್ಛಗೊಳಿಸಬೇಕು ಎಂದು ತಾಲೂಕು ಆರೋಗ್ಯಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.
ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ನಡೆದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಹಾಗೂ ಬಾಯಿ ಆರೋಗ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಾಯಿ ಉತ್ತಮವಾಗಿದ್ದರೆ ದೇಹವೂ ಆರೋಗ್ಯವಾಗಿರುತ್ತದೆ. ಬಾಯಿ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದರು.
ಸಾರ್ವಜನಿಕ ಆಸ್ಪತ್ರೆ ದಂತ ತಜ್ಞ ಡಾ.ಸಮೀವುಲ್ಲಾ ಶರೀಫ್ ಮಾತನಾಡಿ, ನಮ್ಮ ಬಾಯಿ ನಮ್ಮ ದೈಹಿಕ ಆರೋಗ್ಯಕ್ಕೆ ಕನ್ನಡಿ ಇದ್ದಂತೆ. ಅನೇಕ ಕಾಯಿಲೆಗಳ ರೋಗ ಲಕ್ಷಣಗಳು ಮೊದಲಿಗೆ ಬಾಯಲ್ಲಿ ಕಾಣಿಸಿಕೊಳ್ಳುತ್ತವೆ. ನಾವು ಸೇವಿಸುವ ಆಹಾರ ಎಷ್ಟೇ ಶುಚಿ, ಪೌಷ್ಟಿಕಾಂಶದಿಂದ ಕೂಡಿದ್ದೂ ನಮ್ಮ ಬಾಯಿ ಆರೋಗ್ಯಕರವಾಗಿಲ್ಲದಿದ್ದರೆ ಅನೇಕ ಕಾಯಿಲೆಗಳು ಬರುವ ಸಂಭವವಿರುತ್ತದೆ. ನಿತ್ಯ ಎರಡು ಬಾರಿ ಹಲ್ಲುಗಳನ್ನು ಸ್ವಚ್ಛಗೊಳಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರೋಹನ, ಎನ್‌ಟಿಇಪಿ ಸಿಬ್ಬಂದಿ ನಾಗರಾಜು, ಉಮೇಶ್, ಮಹೇಶ, ಆರೋಗ್ಯ ಸುರಕ್ಷಾಧಿಕಾರಿ ಜಯಶ್ರೀ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net