ಆರೋಗ್ಯ ಮಂದಿರದ ವೈದ್ಯಾಧಿಕಾರಿ ಡಾ.ದಿನೇಶ್ ಕುಮಾರ್ ಮಾತನಾಡಿ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಳ್ಳಬೇಕು. ಹೆಚ್ಚಾಗಿ ಪೌಷ್ಟಿಕ ಆಹಾರಗಳನ್ನು ಸೇವಿಸಬೇಕಿದೆ. ಇವುಗಳು ದೇಹಕ್ಕೆ ಅಗತ್ಯವಾದ ವಿಟಮಿನ್‌ಗಳು, ಖನಿಜಗಳು, ಪ್ರೋಟೀನ್, ಕಾರ್ಬೋಹೈಡ್ರೇಟ್ ಮತ್ತು ಆರೋಗ್ಯಕರ ಕೊಬ್ಬನ್ನು ಸಮರ್ಪಕವಾಗಿ ಒದಗಿಸುತ್ತವೆ. ಹಸಿರು ತರಕಾರಿಗಳು, ಹಣ್ಣುಗಳು, ಧಾನ್ಯಗಳು, ಸಮತೋಲಿತ ಆಹಾರ ಕ್ರಮವು ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೀರ್ಘಕಾಲದ ಕಾಯಿಲೆಗಳನ್ನು ತಡೆಯಲು ಅತ್ಯಗತ್ಯವಾಗಿವೆ ಎಂದರು.