ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಚಪ್ಪರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಬನಶಂಕರಿ ಮಹಿಳಾ ಸಮಾಜ ಹಾಗೂ ಲಕ್ಷ್ಮೀದೇವಿ ಮಹಿಳಾ ಟ್ರಸ್ಟ್ ಅಧ್ಯಕ್ಷೆ ಶಾಂತರಾಮಸ್ವಾಮಿ ಅವರಿಂದ ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಚಪ್ಪರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಬನಶಂಕರಿ ಮಹಿಳಾ ಸಮಾಜ ಹಾಗೂ ಲಕ್ಷ್ಮೀದೇವಿ ಮಹಿಳಾ ಟ್ರಸ್ಟ್ ಅಧ್ಯಕ್ಷೆ ಶಾಂತರಾಮಸ್ವಾಮಿ ಅವರಿಂದ ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
Published on

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಶ್ರಮದ ಮನೋಭಾವ ಬೆಳೆಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಚಪ್ಪರದಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಓಂಕಾರಮೂರ್ತಿ ಹೇಳಿದರು.

ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಬನಶಂಕರಿ ಮಹಿಳಾ ಸಮಾಜ ಹಾಗೂ ಲಕ್ಷ್ಮೀದೇವಿ ಮಹಿಳಾ ಟ್ರಸ್ಟ್ ಅಧ್ಯಕ್ಷೆ ಶಾಂತರಾಮಸ್ವಾಮಿ ಅವರ ವತಿಯಿಂದ ಉಚಿತವಾಗಿ ನೀಡಲಾದ ನೋಟ್ ಪುಸ್ತಕಗಳನ್ನು ಕನ್ನಡ ನಂ.1 ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಮಾಜಮುಖಿ ಸಂಘ-ಸಂಸ್ಥೆಗಳು ನೀಡುತ್ತಿರುವ ಸಹಕಾರ ಶ್ಲಾಘನೀಯ. ಇಂತಹ ನೆರವು ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಇನ್ನಷ್ಟು ಆಸಕ್ತಿ ಮೂಡಿಸುವುದರ ಜತೆಗೆ ಉತ್ತಮ ಸಾಧನೆಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ದಿವ್ಯಾ, ಉಷಾ, ಸಚಿನ್ ಹಾಗೂ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net