ಉಚಿತ ಟ್ಯೂಷನ್ ಕ್ಲಾಸ್ ಸಮರೋಪ

ಹನಗೋಡು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭವನ್ನು ಸಂತೋಷ್ ಕುಮಾರ್ ಉದ್ಘಾಟಿಸಿದರು. ಮಹೇಶ್, ಸುನಂದಾ, ವರ್ಷಾ, ರವಿ ಇದ್ದರು.
ಹನಗೋಡು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭವನ್ನು ಸಂತೋಷ್ ಕುಮಾರ್ ಉದ್ಘಾಟಿಸಿದರು. ಮಹೇಶ್, ಸುನಂದಾ, ವರ್ಷಾ, ರವಿ ಇದ್ದರು.
Published on
ಹನಗೋಡು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ 3 ತಿಂಗಳ ಟ್ಯೂಷನ್ ಕ್ಲಾಸ್ ಆಯೋಜಿಸಿ ಅನುಕೂಲ ಕಲ್ಪಿಸುತ್ತಿದೆ ಎಂದು ಉಪ ಪ್ರಾಂಶುಪಾಲ ಸಂತೋಷ್ ಕುಮಾರ್ ಮಾಹಿತಿ ನೀಡಿದರು.
ಹನಗೋಡು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಶ್ರೀಕ್ಷೇತ್ರದ ಯೋಜನೆ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ 3 ತಿಂಗಳ ಟ್ಯೂಷನ್ ಆಯೋಜನೆ ಮಾಡಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕ ಪಡೆಯಲು ಸಹಕಾರ ನೀಡುತ್ತಿದೆ ಎಂದರು.
ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ದಾ.ರಾ.ಮಹೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಜನೆ ಮೇಲ್ವಿಚಾರಕಿ ಸುನಂದಾ, ಶಿಕ್ಷಕಿ ವರ್ಷಾ, ಸೇವಾಪ್ರತಿನಿಧಿ ರವಿ, ವಿದ್ಯಾರ್ಥಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net