ಮೈಸೂರು: ಜೆಡಿಎಸ್‌ನೊಂದಿಗೆ ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಸಿಡಿಮಿಡಿಗೊಂಡ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜಿಟಿಡಿ ಹೆಸರನ್ನು ನನ್ನ ಮುಂದೆ ಪ್ರಸ್ತಾಪಿಸ ಬೇಡಿ. ಅದೆಲ್ಲ ಮುಗಿದು ಹೋದ ಕತೆ. ಅವರು ಒಂದು ಕಾಲಲ್ಲ, ಎರಡು ಕಾಲನ್ನು ಹೊರಗಡೆ ಇಟ್ಟಿದ್ದಾರೆ ಎಂದು ಕುಟುಕಿದರು.