ಮೈಸೂರಿನಲ್ಲಿ ಗೌತಮ ಟ್ರಸ್ಟ್‌ನಿಂದ ಜನಪದ ಕಲೆಗಳ ತರಬೇತಿ ಶಿಬಿರ

 ಮೈಸೂರು ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಗುರುವಾರ ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು  ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ ಉದ್ಘಾಟಿಸಿದರು. ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕೆ.ಸಿದ್ದಲಿಂಗು, ಪಿ.ರಾಘವೇಂದ್ರ ಹಾಗೂ ಇತರರು ಇದ್ದರು.
ಮೈಸೂರು ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಗುರುವಾರ ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ ಉದ್ಘಾಟಿಸಿದರು. ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಕೆ.ಸಿದ್ದಲಿಂಗು, ಪಿ.ರಾಘವೇಂದ್ರ ಹಾಗೂ ಇತರರು ಇದ್ದರು.
Published on
ಮೈಸೂರು: ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಗುರುವಾರ ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ ಮಾತನಾಡಿ, ಯುವಜನರು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಕಾಲಘಟ್ಟದಲ್ಲಿ ರಂಗಭೂಮಿ ಮತ್ತು ಜಾಪನದ ಕಲೆಗಳಲ್ಲಿ ತೊಡಗಿಸಿಕೊಂಡು ಯಶಸ್ಸು ಗಳಿಸುವುದು ಸವಾಲಾಗಿದೆ ಎಂದರು.
ಸರ್ಕಾರ ಮತ್ತು ಸಮಾಜದಿಂದ ರಂಗ ತರಬೇತಿಗಳಿಗೆ ಸಹಕಾರದ ಕೊರತೆ ಇದ್ದರೂ ಗ್ರಾಮೀಣ ಭಾಗದಲ್ಲಿ ಜಾನಪದ ಮತ್ತು ರಂಗ ಕಲೆಗಳಿಂದ ಜನರನ್ನು ಜಾಗೃತಿ ಮೂಡಿಸುವ ಕೆಲಸವನ್ನು ಕಲಾವಿದರೂ, ರಂಗ ಸಂಸ್ಥೆಗಳು ನಡೆಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜದಲ್ಲಿ ಹೆಚ್ಚಿನ ಸಾಧಕರಲ್ಲಿ ರಂಗಭೂಮಿ ಮತ್ತು ಜಾನಪದ ಕಲಾವಿದರೆ ಮುಂಚೂಣಿಯಲ್ಲಿಯಲ್ಲಿದ್ದಾರೆ. ಸತ್ಯವನ್ನು ಹೇಳುವ, ವೈಚಾರಿಕ ಮನೋಭಾವನೆಯನ್ನು ಬೆಳೆಸುವ ಕೌಶಲ್ಯ ರಂಗಕ್ಕಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1 ಸಹಾಯಕ ನಿರ್ದೇಶಕ ಕೆ.ಸಿದ್ದಲಿಂಗು, ಮೈಸೂರು ಅಬಕಾರಿ ಉಪ ನಿರೀಕ್ಷಕ ಪಿ.ರಾಘವೇಂದ್ರ, ಮೈಸೂರು ವಿಶ್ವೇಶ್ವರನಗರ ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಪುರುಷರ ವಿದ್ಯಾರ್ಥಿ ನಿಲಯ ಪಾಲಕ ಕೆ.ಮಹೇಶ್, ರಂಗಭೂಮಿ ನಿರ್ದೇಶಕ ದಿನೇಶ್, ಗೌತಮ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ತಲಕಾಡು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net