ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು : ವಿನಯ್‌ಕುಮಾರ್ ಸೊರಕೆ

ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಜೀವ ವಿಮೆಬಾಂಡ್ ವಿತರಣೆ ಹಾಗೂ ಜಿಲ್ಲಾ ಪ್ರಚಾರ ಸಮಿತಿ ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ಕುಮಾರ್ ಸೊರಕೆ ಮಾತನಾಡಿದರು. ಡಾ.ಬಿ.ಜೆ.ವಿಜಂುಕುವಾರ್, ದೊಡ್ಡಸ್ವಾಮೇಗೌಡ, ಪ್ರಣತಿ ಪ್ರಕಾಶ್ ಹಾಗೂ ಇತರರು ಇದ್ದರು.
ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಜೀವ ವಿಮೆಬಾಂಡ್ ವಿತರಣೆ ಹಾಗೂ ಜಿಲ್ಲಾ ಪ್ರಚಾರ ಸಮಿತಿ ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ಕುಮಾರ್ ಸೊರಕೆ ಮಾತನಾಡಿದರು. ಡಾ.ಬಿ.ಜೆ.ವಿಜಂುಕುವಾರ್, ದೊಡ್ಡಸ್ವಾಮೇಗೌಡ, ಪ್ರಣತಿ ಪ್ರಕಾಶ್ ಹಾಗೂ ಇತರರು ಇದ್ದರು.
Published on
ಮೈಸೂರು: ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು ಎಂದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ಕುಮಾರ್ ಸೊರಕೆ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಜೀವ ವಿಮೆಬಾಂಡ್ ವಿತರಣೆ ಹಾಗೂ ಜಿಲ್ಲಾ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದಿಂದ ದೂರ ಇಡದೆ ಅವರನ್ನು ನಮ್ಮೊಂದಿಗೆ ಕರೆದೊಯ್ಯಬೇಕು. ಈ ವಿಚಾರದಲ್ಲಿ ಎಲ್ಲರು ಪ್ರಜ್ಞಾವಂತ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ಹಲವು ಜನರ ಅಭಿವೃದ್ಧಿಗೆ ಪೂರಕವಾಗಿದೆ. ಪ್ರತಿಪಕ್ಷದವರು ಈ ಗ್ಯಾರಂಟಿ ಯೋಜನೆಗಳ ಕುರಿತು ಅಪಪ್ರಚಾರ ನಡೆಸಿದರು. ಆದರೆ, ಯೋಜನೆಯಿಂದ ಹಲವಾರು ಜನರಿಗೆ ಅನುಕೂಲವಾಗಿದೆ. ಆದರೆ, ಯೋಜನೆಯಿಂದ ಆಗಿರುವ ಪ್ರಯೋಜನಗಳ ಕುರಿತು ಹೆಚ್ಚು ಚರ್ಚೆ ನಡೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅನ್ನಭಾಗ್ಯದಿಂದ ರಾಜ್ಯದ ಜನರ ಹಸಿವು ನೀಗಿದೆ. ದೇಶದಲ್ಲಿ ಒಂದು ಹೊತ್ತು ಊಟವಿಲ್ಲದ 65 ಲಕ್ಷ ಮಕ್ಕಳು ಇದ್ದಾರೆ. ಜಗತ್ತಿನ ಈ ಸಾಲಿನ ಪಟ್ಟಿಯಲ್ಲಿ ದೇಶ ಮೂರನೇ ಸ್ಥಾನದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಸಮಾಜದಲ್ಲಿ ಹಿಂದುಳಿದವರನ್ನು ಮೇಲೆತ್ತುವ, ಸಮಾಜಮುಖಿಯನ್ನಾಗಿಸುವ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡುತ್ತಿದೆ ಎಂದರು.
ಕೇಂದ್ರದಲ್ಲಿ ಸರ್ಕಾರ ಮನುಸ್ಮತಿ ಆಧಾರದಲ್ಲಿ ಆಡಳಿತ ನಡೆಸುತ್ತಿದೆ. ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಕಂದಕಗಳನ್ನು ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ಆ ಮೂಲಕ ಸಮಾಜದಲ್ಲಿ ಜನರ ಮಧ್ಯೆ ಗೋಡೆ ನಿರ್ಮಿಸುವ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಆಶಯದಡಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಂುಕುವಾರ್ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಪ್ರಚಾರ ಸಮಿತಿ ಜತೆಗೂಡಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಗೆ ಜೀವವಿಮೆ ಬಾಂಡ್ ನೀಡುತ್ತಿದ್ದು, ಈವರೆಗೂ 500 ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಗೆ 3 ಹಂತದಲ್ಲಿ ನೀಡಿದ್ದೇವೆ. ಇದರ ಸಂಪೂರ್ಣ ಹಣವನ್ನು ಸಮಿತಿಯೇ ಬರಿಸುತ್ತಿದೆ. ಈ ಬಾಂಡ್ ಮೂಲಕ ಯಾವ ಆಸ್ಪತ್ರೆಗಳಲ್ಲೂ 2 ಲಕ್ಷದವರೆಗೆ ಆರೋಗ್ಯದ ಚಿಕಿತ್ಸೆ ಪಡೆಯಬಹುದು ಎಂದರು.
ಮಾಜಿ ಸಚಿವ ಕೋಟೆ ಶಿವಣ್ಣ, ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ನಾಗರಾಜು, ಎಡೆತಲೆ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಕಾಂಗ್ರೆಸ್ ನಗರ ಎಸ್‌ಸಿ ಘಟಕ ಅಧ್ಯಕ್ಷ ರಮೇಶ್, ಲಿಂಗತ್ವ ಅಲ್ಪಸಂಖ್ಯಾತರ ಸಂಘದ ಜಿಲ್ಲಾಧ್ಯಕ್ಷೆ ಪ್ರಣತಿ ಪ್ರಕಾಶ್ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net