ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತಿ.ನರಸೀಪುರದ ಬೈರಾಪುರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹೆಳವರಹುಂಡಿ ನಂದೀಶ್ ಅವರ ಆಯ್ಕೆಗೆ ಸಹಕಾರ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸನ್ಮಾನಿಸಿದರು. ಮಹೇಶ್, ನಗರ್ಲೆ ಎಂ.ಮಹದೇವಸ್ವಾಮಿ, ನಂದ, ವಿಜಿ ಇತರರು ಇದ್ದರು.
ತಿ.ನರಸೀಪುರ : ಬಿಜೆಪಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸುವ ಮೂಲಕ ಕಾರ್ಯಕರ್ತರು ಮುಂಬರುವ ನಗರ, ಪಟ್ಟಣದ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇತ್ತೀಚೆಗೆ ವರುಣ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳ ಆಯ್ಕೆಯಲ್ಲಿ ತಿ.ನರಸೀಪುರ ಪಟ್ಟಣದ ಬೈರಾಪುರ ಮಹಾಶಕ್ತಿ ಕೇಂದ್ರ ನೂತನ ಅಧ್ಯಕ್ಷ ಹೆಳವರಹುಂಡಿ ನಂದೀಶ್ ಅವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಬೇಕೆಂದು ಸಲಹೆ ನೀಡಿದರು.
ಶಕ್ತಿ ಕೇಂದ್ರದ ನೂತನ ಅಧ್ಯಕ್ಷ ನಂದೀಶ್ ಸೇರಿದಂತೆ ವರುಣ ಬಿಜೆಪಿ ಕ್ಷೇತ್ರಾಧ್ಯಕ್ಷ ನಗರ್ಲೆ ಎಂ.ಮಹದೇವಸ್ವಾಮಿ, ವಿಜಯೇಂದ್ರ ಅಭಿಮಾನಿ ಬಳಗದ ಅಧ್ಯಕ್ಷ ಮಹೇಶ್, ಮುಖಂಡರಾದ ಮಂಜ, ವಿಜಿ, ಮೂರ್ತಿ, ಮಹೇಂದ್ರ ಇದ್ದರು.