ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಿ

ಬೆಂಗಳೂರಿನ ವಿಧಾನಸೌಧದಲ್ಲಿ ಸಾಲಿಗ್ರಾಮ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಶಾಸಕ ರವಿಶಂಕರ್ ಜತೆ ಕಲಾಪ ವೀಕ್ಷಿಸಿದರು. ಡಾ. ಪ್ರತಿಮಾ, ಬ್ರಿಜೇಶ್, ಕುಮಾರಸ್ವಾಮಿ, ಸ್ವಾಮಿ ಇದ್ದರು.
ಬೆಂಗಳೂರಿನ ವಿಧಾನಸೌಧದಲ್ಲಿ ಸಾಲಿಗ್ರಾಮ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಶಾಸಕ ರವಿಶಂಕರ್ ಜತೆ ಕಲಾಪ ವೀಕ್ಷಿಸಿದರು. ಡಾ. ಪ್ರತಿಮಾ, ಬ್ರಿಜೇಶ್, ಕುಮಾರಸ್ವಾಮಿ, ಸ್ವಾಮಿ ಇದ್ದರು.
Published on
ಸಾಲಿಗ್ರಾಮ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ 59ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಧಾನಸಭೆ ಕಲಾಪವನ್ನು ವೀಕ್ಷಿಸಿದರು.
ಬೆಂಗಳೂರು ವಿಧಾನ ಸೌಧದಲ್ಲಿ ಬಜೆಟ್ ಮೇಲಿನ ಚರ್ಚೆಯ ಕಲಾಪವನ್ನು ವೀಕ್ಷಿಸಲು ಕೆ. ಆರ್. ನಗರ ಕ್ಷೇತ್ರದ ಶಾಸಕ ಡಿ ರವಿಶಂಕರ್ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಟ್ಟರು.
ಶಾಸನ ಸಭೆಯ ಕಾರ್ಯವೈಖರಿ ಮತ್ತು ಜನಪ್ರತಿನಿಧಿಗಳು ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಚರ್ಚಿಸುವ ವಿಧಾನವನ್ನು ಪ್ರತ್ಯಕ್ಷವಾಗಿ ತಿಳಿಸಿಕೊಡಲು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಲಾಗಿತ್ತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ.ಎಸ್.ರಾಜೇಶ ಕೆ.ಆರ್.ನಗರ ಕ್ಷೇತ್ರದ ಶಾಸಕ ಡಿ.ರವಿಶಂಕರ್ ವಿದ್ಯಾರ್ಥಿಗಳಿಗೆ ಸಂಸದೀಯ ವ್ಯವಸ್ಥೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ನಂತರ ಮಾತನಾಡಿದ ಶಾಸಕ ಡಿ. ರವಿಶಂಕರ್, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಮುಂದಿನ ದಿನಗಳಲ್ಲಿ ನೀವು ಸಹ ಅಧಿಕಾರಿಗಳಾಗಿ ಶಾಸನ ಸಭೆಯ ಜನಪ್ರತಿನಿಧಿಗಳಾಗಿ ಬರಬೇಕೆಂದು ಹಾರೈಸಿದರು.
ಕಾಲೇಜು ಪ್ರಾಧ್ಯಾಪಕರಾದ ಡಾ. ಪ್ರತಿಮಾ, ಬ್ರಿಜೇಶ್, ಕುಮಾರಸ್ವಾಮಿ,ಸ್ವಾಮಿ, ವಿದ್ಯಾರ್ಥಿಗಳು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net