ಪಟ್ಟಣದ ಶ್ರೀ ಗುರು ಚನ್ನಮಲ್ಲಿಕಾರ್ಜುನ ಸ್ವಾಮೀಜಿ ವಿದ್ಯಾಸಂಸ್ಥೆ ಆವರಣದಲ್ಲಿ ಶನಿವಾರ ಧಾರ್ಮಿಕ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ಕ್ಕೆ ಆರಂಭವಾಗುವ ಸಮಾರಂಭದ ಸಾನ್ನಿಧ್ಯವನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ದೇವನೂರು ಮಠದ ಶ್ರೀ ಮಹಾಂತ ಸ್ವಾಮೀಜಿ, ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮೀಜಿ, ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಶ್ರೀ ಗುರುಮಲ್ಲೇಶ್ವರರ ಭಾವಚಿತ್ರವನ್ನು ಬೆಟ್ಟದಪುರದ ಸಲೀಲಾಖ್ಯ ಮತ್ತು ಕನ್ನಡ ಮಠದ ಶ್ರೀ ಚನ್ನಬಸವ ದೇಶಿಕೇಂದ್ರ ಸ್ವಾಮೀಜಿ ಅನಾವರಣ ಮಾಡಲಿದ್ದಾರೆ. ಬಸವೇಶ್ವರರ ಭಾವಚಿತ್ರವನ್ನು ಮರೆಯಾಲ ಮಠದ ಶ್ರೀ ಇಮ್ಮಡಿ ಮುರುಗ ರಾಜೇಂದ್ರ ಸ್ವಾಮೀಜಿ ಅನಾವರಣಗೊಳಿಸಲಿದ್ದು, ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ ಭಾವಚಿತ್ರವನ್ನು ಪಡಗೂರು ಅಡವಿ ಮಠದ ಶ್ರೀ ಶಿವಲಿಂಗೇಂದ್ರ ಸ್ವಾಮೀಜಿ, ಡಾ. ಶ್ರೀ ಶಿವಕುಮಾರ ಶ್ರೀಗಳ ಭಾವಚಿತ್ರವನ್ನು ಮಲ್ಲನ ಮೂಲೆಯ ಶ್ರೀ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ ಹಾಗೂ ಚನ್ನಮಲ್ಲಿಕಾರ್ಜುನ ಶ್ರೀಗಳ ಭಾವಚಿತ್ರವನ್ನು ಬರಡನಪುರದ ಪರಶಿವಮೂರ್ತಿ ಸ್ವಾಮೀಜಿ ಅನಾವರಣಗೊಳಿಸಲಿದ್ದಾರೆ.