ಸರ್ಕಾರದಿಂದ ಟನ್ ಕಬ್ಬಿಗೆ 50 ರೂ. : ಮೈಸೂರು ಜಿಲ್ಲಾಧಿಕಾರಿ ಭರವಸೆ

ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು. ರೈತರಿಗೆ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ನೀಡಲಾಗುವುದು ಎಂದು ಞಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಭರವಸೆ ನೀಡಿದರು.
ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು. ರೈತರಿಗೆ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ನೀಡಲಾಗುವುದು ಎಂದು ಞಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಭರವಸೆ ನೀಡಿದರು.
Published on
ಮೈಸೂರು: ಕಬ್ಬಿಗೆ ಸರ್ಕಾರ ಘೋಷಣೆ ಮಾಡಿರುವ ಹೆಚ್ಚುವರಿ ನೂರು ರೂ.ಗಳ ಪೈಕಿ ಸರ್ಕಾರದ ಬಾಬ್ತು ಟನ್‌ಗೆ 50 ರೂ.ಗಳನ್ನು ಏ.29ರ ಒಳಗೆ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆಯನ್ನು ಹಿಂಪಡೆದಿದೆ.
ಕಬ್ಬಿಗೆ ರಾಜ್ಯ ಸರ್ಕಾರ ಹೆಚ್ಚುವರಿ ನೂರು ರೂ. ನಿಗದಿ ಮಾಡಿ ಸಕ್ಕರೆ ಕಾರ್ಖಾನೆಗಳು 50 ರೂ., ಸರ್ಕಾರ 50 ರೂ.ಪಾವತಿಸಬೇಕು ಎಂದು ಆದೇಶ ಹೊರಡಿಸಿತ್ತು. ಆದರೆ ಸಕ್ಕರೆ ಕಾರ್ಖಾನೆಗಳ ಒಕ್ಕೂಟ ಸರ್ಕಾರದ ಆದೇಶದ ವಿರುದ್ಧ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಹಣ ಪಾವತಿ ಸಾಧ್ಯವಿಲ್ಲ ಎಂದು ಕಾರ್ಖಾನೆಯವರು ತಿಳಿಸಿದ್ದಾರೆ. ಆದರೆ ಸರ್ಕಾರದ ವತಿಯಿಂದ ಪಾವತಿಸಬೇಕಾದ ಟನ್‌ಗೆ 50 ರೂ.ಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಸರ್ಕಾರದ ಎಲ್ಲ ಆದೇಶಗಳಿಗೂ ಕಾರ್ಖಾನೆಯವರು ತಡೆಯಾಜ್ಞೆ ತರುತ್ತಾರೆ. ಈ ರೀತಿ ಆದರೆ ರೈತರಿಗೆ ನ್ಯಾಯ ಹೇಗೆ ಸಿಗುತ್ತದೆ. ಗುಜರಾತ್‌ನಲ್ಲಿ ಒಂದು ಟನ್ ಕಬ್ಬಿಗೆ 5,000 ರೂ.ಪಾವತಿಸಿದ್ದಾರೆ. ಆದರೆ ಬಣ್ಣಾರಿ ಕಾರ್ಖಾನೆಯವರು 3400 ರೂ.ಕೊಡಲು ಕಷ್ಟ ಎಂದು ಹೇಳುತ್ತಾರೆ. ಇದು ರೈತರಿಗೆ ಮಾಡುವ ಮೋಸ ಅಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಸೋಮಶೇಖರ್, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್, ಕುರುಬೂರು ಸಿದ್ದೇಶ್, ಲಕ್ಷ್ಮೀಪುರ ವೆಂಕಟೇಶ್, ಕೆಂಡಗಣಪ್ಪ, ಪ್ರಸಾದ್ ನಾಯಕ, ಮಹದೇವಸ್ವಾಮಿ, ನಾಗೇಶ್, ಬಸವರಾಜ, ಮಹಾದೇವು, ನಾಗೇಂದ್ರ, ಅಂಬಳೆ ಮಂಜುನಾಥ್ ಹಾಗೂ ಇತರರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net