ನಗರದ ಡೀಡ್ ಸಂಸ್ಥೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಆದಿವಾಸಿ ಜನತಾ ಪಾರ್ಲಿಮೆಂಟ್ ಸಮಿತಿ ಅಧ್ಯಕ್ಷ ಹರ್ಷ ಮಾತನಾಡಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೇರಿಸಲು ಒತ್ತಾಯಿಸಿದ್ದು, ಈ ಕುರಿತು ಕೇಂದ್ರಕ್ಕೆ ನಿಯೋಗ ಕೊಂಡೊಯ್ದು ಮನವರಿಕೆ ಮಾಡಿಕೊಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.