ಕುವೆಂಪು ಚಿಂತನೆಗಳು ಇಂದಿನ ಯುವ ಪೀಳಿಗೆಗೆ ಅತ್ಯವಶ್ಯ

ಕೆ.ಆರ್.ನಗರದಲ್ಲಿ ಕುವೆಂಪು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕುವೆಂಪು ಜಯಂತಿ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ.ಎನ್.ಬಸಂತ್ ಉದ್ಘಾಟಿಸಿದರು.ಡಾ.ಮಾಲೇಗೌಡ, ವೀರಭದ್ರಾಚಾರ್, ಸಿ.ಕೆ.ರವೀಂದ್ರ, ಜಿ.ಪಿ.ಮಂಜು, ಗಾರೆ ಮಂಜಣ್ಣ ಇನ್ನಿತರರು ಇದ್ದರು.
ಕೆ.ಆರ್.ನಗರದಲ್ಲಿ ಕುವೆಂಪು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕುವೆಂಪು ಜಯಂತಿ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ.ಎನ್.ಬಸಂತ್ ಉದ್ಘಾಟಿಸಿದರು.ಡಾ.ಮಾಲೇಗೌಡ, ವೀರಭದ್ರಾಚಾರ್, ಸಿ.ಕೆ.ರವೀಂದ್ರ, ಜಿ.ಪಿ.ಮಂಜು, ಗಾರೆ ಮಂಜಣ್ಣ ಇನ್ನಿತರರು ಇದ್ದರು.
Published on

ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಮಕ್ ಅಧ್ಯಕ್ಷ ಕೆ.ಎನ್.ಬಸಂತ್ ಅಭಿಮತ

ಕೆ.ಆರ್.ನಗರ: ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಆದರ್ಶ, ಚಿಂತನೆಗಳು ಮತ್ತು ಅವರಲ್ಲಿದ್ದ ಮೌಲ್ಯಗಳು ನಮ್ಮೆಲ್ಲರಿಗೂ ಹಾಗೂ ಇಂದಿನ ಯುವ ಪೀಳಿಗೆಗೆ ಅತ್ಯವಶ್ಯ ಎಂದು ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ.ಎನ್.ಬಸಂತ್ ಹೇಳಿದರು.
ಪಟ್ಟಣದ ಸಾಯಿ ಕನ್ವೆನ್ಷನ್ ಹಾಲ್‌ನಲ್ಲಿ ಕುವೆಂಪು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಕುವೆಂಪು ಜಯಂತಿ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ದ ಕೀರ್ತಿ ಕುವೆಂಪು ಅವರಿಗೆ ಸಲ್ಲುತ್ತದೆ ಎಂದರು.
ಪ್ರತಿಯೊಬ್ಬರೂ ಕುವೆಂಪು ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆಗೆ ಅರ್ಥ ಬರುತ್ತದೆ. ಅವರ ಬರವಣಿಗೆ, ಬದುಕಿನಲ್ಲಿ ನಡೆಸಿದ ಸರಳತೆಯ ಜೀವನ ನಾವು ನೀವೆಲ್ಲರೂ ಪಾಲನೆ ಮಾಡಬೇಕಾಗುತ್ತದೆ. ಅವರಲ್ಲಿ ಅಗಾಧವಾದ ಪಾಂಡಿತ್ಯವಿತ್ತು. ತಮ್ಮ ಸಾಹಿತ್ಯದ ಮೂಲಕ ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದವರು. ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಕನ್ನಡದ ಹಲವಾರು ಸಾಹಿತ್ಯ ಪ್ರಕಾರಗಳಲ್ಲಿ ಕವನ. ಕಾದಂಬರಿ, ನಾಟಕ, ಮಹಾಕಾವ್ಯದಲ್ಲಿ ಅಕ್ಷರ ಕೃಷಿ ಮಾಡಿ ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ ಎಂದು ಬಣ್ಣಿಸಿದರು.
ಕಸಾಪ ತಾಲೂಕು ಅಧ್ಯಕ್ಷ ಡಿಂಡಿಮಾ ಶಂಕರ್, ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ.ಮಾಲೇಗೌಡ, ಕುವೆಂಪು ಬಡಾವಣೆ ನಿವಾಸಿಗಳ ಕೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಟಿ.ರಾಮಕೃಷ್ಣೇಗೌಡ, ಸಂಘಟನಾ ಕಾರ್ಯದರ್ಶಿ ಜಿ.ಪಿ.ಮಂಜು ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಟ್ರಸ್ಟ್‌ನ ಗೌರವಾಧ್ಯಕ್ಷ ವೀರಭದ್ರಾಚಾರ್, ಉಪಾಧ್ಯಕ್ಷ ಟಿ.ಸಿ.ಬಸವಗೌಡ, ಕಾರ್ಯಾಧ್ಯಕ್ಷ ಎನ್.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಕೆ.ಎಚ್.ಯೋಗಣ್ಣ, ಕಾರ್ಯದರ್ಶಿ ಎಸ್.ಕೆ.ಸುರೇಶ್, ಖಜಾಂಚಿ ಕೆ.ಆರ್.ಚಂದ್ರಕುಮಾರ್, ನಿರ್ದೇಶಕರಾದ ಎಂ.ಪಿ.ದೊರೆಸ್ವಾಮಿಗೌಡ, ಸಿ.ಕೆ.ರವೀಂದ್ರ, ಕೆ.ಸಿ.ಮಹದೇವಯ್ಯ, ಎಂ.ಸಿ.ಶಿವಕುಮಾರ್, ಸಿ.ಕೆ.ಜಯರಾಮೇಗೌಡ, ಟಿ.ಎನ್. ಕುಮಾರೇಗೌಡ, ಭಗೀರಥ. ಡೇರಿ ಸ್ವಾಮಣ್ಣ, ಗಾರೆ ಮಂಜಣ್ಣ, ಎಚ್.ಕೆ.ಸ್ವಾಮಿ, ಬಾಳೆಎಲೆ ರವಿ, ಹೆಚ್.ಎಸ್.ಕೆಂಪರಾಜು ಸೇರಿದಂತೆ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net