

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಮೃತಪಟ್ಟ ನಂತರವೂ ಅವರ ಖಾತೆಗಳಿಗೆ 2.16 ಕೋಟಿ ರೂ.ಹಣ ಜಮೆಯಾಗಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳ ವಹಿವಾಟು ಸ್ಥಗಿತಗೊಳಿಸಬೇಕು ಎಂದು ಜಿಲ್ಲಾ ಪಂಚಾಯಹಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.