ಹುಲಿ ದಾಳಿಗೆ ಹಸು ಬಲಿ

ಹನಗೋಡು ಹೋಬಳಿಯ ಹೊಸಕೋಟೆ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿರುವುದು.
ಹನಗೋಡು ಹೋಬಳಿಯ ಹೊಸಕೋಟೆ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿರುವುದು.
Published on
ಹನಗೋಡು: ಹೋಬಳಿಯ ಹೊಸಕೋಟೆ ಗ್ರಾಮದ ರಕ್ಷಿತ್ ಅವರಿಗೆ ಸೇರಿದ ಹಸು ಶುಕ್ರವಾರ ಸಂಜೆ ಹುಲಿ ದಾಳಿಗೆ ಬಲಿಯಾಗಿದೆ.
ಹೊಲದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಇದನ್ನು ಕಂಡು ಭಯಗೊಂಡ ರಕ್ಷಿತ್ ಅವರ ತಾಯಿ ಫೋನ್ ಮಾಡಿ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ರಕ್ಷಿತ್ ಅವರು ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.
ಈ ವೇಳೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿ ಹುಲಿ ಸೆರೆಗೆ ಬೋನು ಇರಿಸುವುದಾಗಿ ತಿಳಿಸಿದ್ದಾರೆ. ಹಸು ಕಳೆದುಕೊಂಡ ರಕ್ಷಿತ್ ಅವರಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net