ಹನಗೋಡು ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ್ದ ವೇಳೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಹುಣಸೂರು ತಾಲೂಕಿನಲ್ಲಿ ಬಹುತೇಕ ಬೋರ್‌ವೆಲ್‌ಗಳು, ಕೆರೆ-ಕಟ್ಟೆಗಳಲ್ಲಿ ನೀರು ಬತ್ತಿದೆ, ಬೆಳೆಗಳು ಒಣಗುತ್ತಿವೆ. ಬರದ ಛಾಯೆ ಆವರಿಸಿದೆ. ರೈತರು ಸಂಕಷ್ಟದ ಸ್ಥಿತಿಗೆ ಸಿಲುಕಿದ್ದಾರೆ. ತಕ್ಷಣವೇ ಸಮೀಕ್ಷೆ ನಡೆಸಿ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆ ನಷ್ಟದ ಪರಿಹಾರ ನೀಡಲು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.