ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ಚಿಕ್ಕ ಗಡಿಯಾರದ ಬಳಿ ಪ್ರತಿಭಟನೆ ನಡೆಸಲಾಯಿತು.
ತಮ್ಮ ಮೇಲಿರುವ ಅಕ್ರಮ ಗಣಿಗಾರಿಕೆ, ಭೂ ಒತ್ತುವರಿ, ಫೋನ್ ಕದ್ದಾಲಿಕೆ ಹಗರಣಗಳ ತನಿಖೆಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠರನ್ನು ಒಲೈಸಲು ಮುಂದಾಗಿದ್ದಾರೆ. ಈ ಕಾರಣಕ್ಕಾಗಿಯೇ ನಮ್ಮ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಯುವಜನರು ಸಾಹಿತ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಜೋಡೋ ಯುವ ಸಂಘಗಳ ಮೂಲಕ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದ್ದರೆ, ಅದನ್ನು ಇಸ್ಪೀಟ್ ದಂಧೆಗೆ ಹೋಲಿಸುವ ಮೂಲಕ ಕುಮಾರಸ್ವಾಮಿ ಅವರು ರಾಜ್ಯದ ಯುವ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ದೂರಿದರು.