ಎಚ್‌ಡಿಕೆ ಆಡಳಿತ ದೇಶಕ್ಕೆ ಮಾದರಿ

16 ಕೆಆರ್ ಎನ್ -1:-
16 ಕೆಆರ್ ಎನ್ -1:-
Published on
ಕೆ.ಆರ್.ನಗರ: ಕೇಂದ್ರದ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನಪರ ಹಾಗೂ ರೈತರ ಪರವಾಗಿ ಆಡಳಿತ ನೀಡಿರುವುದು ದೇಶಕ್ಕೆ ಮಾದರಿಯಾಗಿದೆ ಎಂದು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಂಸತ್ ತಿಳಿಸಿದರು.
ಪಟ್ಟಣದ ಬಸವೇಶ್ವರ ಬಡಾವಣೆಯ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಮಾತನಾಡಿದರು.
2006 ಮತ್ತು 2018 ರಲ್ಲಿ ಎಚ್‌ಡಿ.ಕುಮಾರಸ್ವಾಮಿ ಅವರು ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡದರು. ಇಂದಿನ ಕಾಂಗ್ರೆಸ್ ಪಕ್ಷದ ದುರಾಡಳಿತ ವಿರೋಧಿಸುವ ಮೂಲಕ ಕೇಂದ್ರ ಸಚಿವರಾದರು ಕೂಡ ರಾಜ್ಯದ ವಿರೋಧ ಪಕ್ಷದ ನಾಯಕರಂತಿದ್ದು, ತಮ್ಮದೇ ಆದ ವ್ಯಕ್ತಿತ್ವ ಮೂಲಕ ಛಾಪು ಮೂಡಿಸಿದ್ದಾರೆ. ಇವರ ಕೈ ಬಲಪಡಿಸಲು ನಾವೆಲ್ಲ ಶ್ರಮಿಸೋಣ ಎಂದು ಹೇಳಿದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಅಧ್ಯಕ್ಷ ಹಂಪಾಪುರ ಕುಮಾರ್, ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್.ಚನ್ನಬಸಪ್ಪ ಮಾತನಾಡಿದರು.
ಇದಕ್ಕೂ ಮೊದಲು ಪಟ್ಟಣದ ಬಸವೇಶ್ವರ ಬ್ಲಾಕ್‌ನಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಕೇಂದ್ರದ ಸಚಿವ ಎಚ್.ಡಿ.ಕೆ. ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು, ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ, ಬಾಬು ಜಗಜೀವನ್ ರಾಮ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ನಗರಾಧ್ಯಕ್ಷ ಸಂತೋಷ್ ಗೌಡ, ಯುವ ಜೆಡಿಎಸ್ ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಕಗ್ಗರೆ ಕುಚೇಲ, ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ಹಂಪಾಪುರ ಸುರೇಶ್, ಡಿ.ವಿ.ಗುಡಿ ಯೋಗೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ, ತಾಲೂಕು ಅಧ್ಯಕ್ಷೆ ರಾಜಲಕ್ಷ್ಮೀ, ನಗರಾಧ್ಯಕ್ಷೆ ರೂಪಾ, ಕಾನೂನು ಸಲಹೆಗಾರ ವಕೀಲ ಅಂಕನಹಳ್ಳಿ ತಿಮ್ಮಪ್ಪ, ತಾಪಂ ಮಾಜಿ ಸದಸ್ಯ ಹಂಗರಬಾಯನಹಳ್ಳಿ ತಮ್ಮಣ್ಣ, ಪುರಸಭೆ ಮಾಜಿ ಅಧ್ಯಕ್ಷ ಡಿ.ಕಾಂತರಾಜ್, ಮಾಜಿ ಸದಸ್ಯರಾದ ಉಮೇಶ್ , ಮಂಜುಳ ಚಿಕ್ಕವೀರು, ತೋಂಟದಾರ್ಯ, ರಾಜಶ್ರೀಕಾಂತ್, ಬಾರ್ ಶಿವಕುಮಾರ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net