ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ : ತನಿಖೆ ನಡೆಸಿ ವರದಿ ನೀಡಲು ಗೃಹಸಚಿವರ ಸೂಚನೆ

ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ
ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ
Published on

ಪ್ರಮುಖ ಮುಖ್ಯಾಂಶಗಳು

  • ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ
  • ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದರಿಂದ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು.
  • ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ
ಮೈಸೂರು: ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಘಟನೆಯಲ್ಲಿ ಬಲೂನ್ ಮಾರುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದರಿಂದ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು.
ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬಲೂನ್ ವ್ಯಾಪಾರಿಗೆ ಹೀಲಿಯಂ ಸಿಲಿಂಡರ್ ಹೇಗೆ ಸಿಕ್ಕಿದೆ. ಎಲ್ಲಿ ಖರೀದಿಸಿದ್ದ ಎಂಬುದರ ಕುರಿತು ತನಿಖೆ ಮಾಡಿ ವರದಿ ನೀಡಲಿದ್ದಾರೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net