ಸುತ್ತೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಆಹಾರ ಮೇಳ ಆಯೋಜಿಸಲಾಗಿತ್ತು.
ಮೇಳ ಉದ್ಘಾಟಿಸಿ ಮಾತನಾಡಿದ ಜೆಎಸ್‌ಎಸ್ ಸಂಸ್ಥೆಗಳ ಸಹಾಯಕ ಸಂಯೋಜನಾಧಿಕಾರಿ ವೀರಭದ್ರಯ್ಯ, ಮನೆ ಆಹಾರ ಆರೋಗ್ಯಕ್ಕೆ ಮದ್ದು. ಮೇಳದಲ್ಲಿ ವಿದ್ಯಾರ್ಥಿಗಳು ಪ್ರಸ್ತುತ ಹವಾಮಾನಕ್ಕೆ ಸಹಕಾರಿಯಾಗುವ ದೇಸಿ ಆಹಾರ ಪದಾರ್ಥ ಮತ್ತು ಪಾನೀಯಗಳನ್ನು ಶುಚಿ-ರುಚಿಯಾಗಿ ತಯಾರಿಸಿರುವುದು ಸ್ವಾಗತಾರ್ಹ ಎಂದರು.
ಜೆಎಸ್‌ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಜಿ.ಎಲ್.ತ್ರಿಪುರಾಂತಕ ಮಾತನಾಡಿ, ಆಹಾರ ತಯಾರಿಕೆ ಒಂದು ಕಲೆಯಾಗಿದ್ದು, ಅದನ್ನು ಭಾರತೀಯ ಹೆಣ್ಣುಮಕ್ಕಳು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಡಾ.ಎಚ್.ಎಂ.ಮಹೇಶ್, ಜೆಎಸ್‌ಎಸ್ ಸಂಸ್ಥೆಗಳ ಎಲ್ಲಾ ವಿಭಾಗಗಳ ಮುಖ್ಯಸ್ಥರು ಇದ್ದರು.