ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ತಿ.ನರಸೀಪುರ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾನಿತ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್.ಸಿ.ಶಿವಮೂರ್ತಿ, ನಾಗೇಶ, ಮರಿಸ್ವಾಮಿ, ಪುಟ್ಟಸ್ವಾಮಿ ಇತರರು ಇದ್ದರು.
ತಿ.ನರಸೀಪುರ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪ್ರತಿಭಾನಿತ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್.ಸಿ.ಶಿವಮೂರ್ತಿ, ನಾಗೇಶ, ಮರಿಸ್ವಾಮಿ, ಪುಟ್ಟಸ್ವಾಮಿ ಇತರರು ಇದ್ದರು.
Published on
ತಿ.ನರಸೀಪುರ: ಪಟ್ಟಣದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ನಾಲ್ವರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ತಾಲೂಕಿಗೆ ಹೆಚ್ಚು ಅಂಕಗಳನ್ನು ಪಡೆದ ಬನ್ನೂರು ವಿವೇಕಾನಂದ ಪ್ರೌಢಶಾಲೆಯ ಸುಶ್ಮಿತಾ (621), ಲೇಖನಾ (619), ತಿ.ನರಸೀಪುರ ಪಟ್ಟಣದ ಬಿಜಿಎಸ್ ಪ್ರೌಢಶಾಲೆ.ಎಂ.ದೀಕ್ಷಾ ಪಟೇಲ್(617) ಹಾಗೂ ಸೋಸಲೆ ಸರ್ಕಾರಿ ಆದರ್ಶ ಶಾಲೆಯ ಕೆ.ಎಸ್.ಸೂರ್ಯಪ್ರಕಾಶ್(615) ಅವರನ್ನು ಸನ್ಮಾನಿಸಲಾಯಿತು.
ಬಿ.ಆರ್.ಸಿ ನಾಗೇಶ್ ಮಾತನಾಡಿ, ನಾಲ್ವರು ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ತೇರ್ಗಡೆಯಾಗುವ ಮೂಲಕ ವಿದ್ಯಾಭ್ಯಾಸ ಮಾಡಿದ ಶಾಲೆ, ತಂದೆ-ತಾಯಿಗಳು ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಇಡೀ ತಾಲೂಕಿನ ಜನರು ತಿರುಗಿ ನೋಡುವಂತಹ ಸಾಧನೆ ಮಾಡಿದ್ದಾರೆ.
ಸಾಧನೆಯಿಂದ ದೊಡ್ಡ ಹುದ್ದೆಗಳನ್ನು ಅಲಂಕರಿಸಿ, ಇತರರಿಗೆ ಮಾದರಿಯಾಗಬೇಕು. ಇನ್ನುಳಿದ ವಿದ್ಯಾರ್ಥಿಗಳಿಗೂ ಸ್ಫೂರ್ತಿ ಆಗಬೇಕು ಎಂದರು.
ಬಿಇಒ ಎಸ್.ಸಿ.ಶಿವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಿಂದ 7 ವರ್ಷ ಶ್ರಮ ವಹಿಸಿದರೆ 70 ವರ್ಷ ಸುಖವಾಗಿರಬಹುದು. ಈ ಅವಧಿಯಲ್ಲಿ ನಿಮ್ಮ ಗುರಿ ಒಂದೇ ಆಗಿರಬೇಕು. ಅದು ಶಿಕ್ಷಣಕ್ಕೆ ಸೀಮಿತವಾಗಬೇಕು ಎಂದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಮರಿಸ್ವಾಮಿ, ಬಿಸಿಯೂಟದ ಸಹಾಯಕ ನಿರ್ದೇಶಕ ಪುಟ್ಟಸ್ವಾಮಿ, ಇಸಿಒಗಳಾದ ಬಸವರಾಜು, ರಮೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net