ಜೆಡಿಎಸ್ ಕ್ಷೇತ್ರಾಧ್ಯಕ್ಷ ಸಿ.ಬಿ ಚಿನ್ನಸ್ವಾಮಿ ಮಾತನಾಡಿ, ಸರಳ, ಸಜ್ಜನಿಕೆ ವ್ಯಕ್ತಿತ್ವದಿಂದ ಸಾಮಾನ್ಯ ಜನರ ಕೈಗೆ ಸಿಗುವ ಶಾಸಕರಾಗಿದ್ದ ಎಂ.ಅಶ್ವಿನ್‌ಕುಮಾರ್ ಅವರು ಪಕ್ಷದ ಜಿಲ್ಲಾಧ್ಯಕ್ಷ ಆಗಿರುವುದು ಹೆಮ್ಮೆಯ ವಿಷಯವಾಗಿದೆ. ಕ್ಷೇತ್ರದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಹುಮ್ಮಸ್ಸು ಮೂಡಿದೆ. ಮುಂದಿನ ದಿನ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿ, ಅದ್ದೂರಿಯಾಗಿ ಸ್ವಾಗತಿಸಿ, ಸನ್ಮಾನಿಸಲಾಗುವುದು ಎಂದು ತಿಳಿಸಿದರು.