ಹೆಣ್ಣು ಮಕ್ಕಳ ಆರೋಗ್ಯಕ್ಕೆ ಎಚ್‌ಪಿವಿ ಲಸಿಕೆ ಸಹಕಾರಿ

ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಚ್.ಪಿ.ವಿ ಲಸಿಕೆ ಬಗ್ಗೆ ಅರಿವು ಮೂಡಿಸಲಾಯಿತು. ಡಾ.ಸಂದೀಪ್, ರವಿ, ರಚನಾ ಇತರರು ಇದ್ದರು.
ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಚ್.ಪಿ.ವಿ ಲಸಿಕೆ ಬಗ್ಗೆ ಅರಿವು ಮೂಡಿಸಲಾಯಿತು. ಡಾ.ಸಂದೀಪ್, ರವಿ, ರಚನಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • HPV vaccine
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇತ್ತಿಚ್ಚೇಗೆ ಎಚ್‌ಪಿವಿ ಲಸಿಕಾ ಹಾಗೂ ಅರಿವು ಕಾರ್ಯಕ್ರಮ ನಡೆಯಿತು.
ಕೇಂದ್ರದ ವೈದ್ಯಾಧಿಕಾರಿ ಡಾ.ಸಂದೀಪ್ ಮಾತನಾಡಿ, ಹೆಣ್ಣು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವುದರೊಂದಿಗೆ ಸುರಕ್ಷಿತ ಲಸಿಕೆ, ಸುಂದರ ಭವಿಷ್ಯ, ನಮ್ಮ ಹೆಣ್ಣು ಮಕ್ಕಳ ಆರೋಗ್ಯ ನಮ್ಮ ಆದ್ಯತೆ ಎಂಬ ಘೋಷವಾಕ್ಯದೊಂದಿಗೆ 14 ವರ್ಷದ ಎಲ್ಲ ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆಯನ್ನು ಹಾಕಿಸುವುದರ ಮೂಲಕ ಗರ್ಭಕಂಠ ಕ್ಯಾನ್ಸರ್‌ಮುಕ್ತ ಸಮಾಜಕ್ಕೆ ಸಹಕಾರ ನೀಡಬೇಕಿದೆ ಎಂದರು.
ಈ ಲಸಿಕೆ ನಮ್ಮ ಹೆಣ್ಣುಮಕ್ಕಳ ಆರೋಗ್ಯ ಹಾಗೂ ನಾಡಿನ ಸುಭದ್ರತೆ ಭವಿಷ್ಯದ ಬುನಾದಿಯಾಗಿದೆ. ಎಚ್‌ಪಿವಿ ಲಸಿಕೆಯು ಹ್ಯೂಮನ್ ಪ್ಯಾಪಿಲೋಮ ಎಂಬ ವೈರಸ್‌ನಿಂದ ಉಂಟಾಗುವ ಕೆಲವು ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಗರ್ಭಕಂಠದ ಕ್ಯಾನ್ಸರ್, ಗುದ ಮತ್ತು ಗಂಟಲು ಕ್ಯಾನ್ಸರ್‌ಗಳನ್ನು ಈ ಲಸಿಕೆಯಿಂದ ತಡೆಗಟ್ಟಬಹುದಾಗಿದೆ ಎಂದು ಹೇಳಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್ ರವಿ, ಸಮುದಾಯ ಆರೋಗ್ಯಾಧಿಕಾರಿ ರಚನಾ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net