ಗುಣಮಟ್ಟದ ಹಾಲು ಪೂರೈಸಿದರೆ ಸಂಘದ ಮುನ್ನಡೆ ಸಾಧ್ಯ

ಹೆಚ್ಚು ಹಾಲು ಸರಬರಾಜು ಮಾಡಿದ ಸಂಘದ ಸದಸ್ಯರು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು.
ಹೆಚ್ಚು ಹಾಲು ಸರಬರಾಜು ಮಾಡಿದ ಸಂಘದ ಸದಸ್ಯರು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು.
Published on

ಹುಲ್ಲಹಳ್ಳಿ: ರೈತರು ಹಾಗೂ ಹಾಲು ಉತ್ಪಾದಕರು ಸಹಕಾರ ಸಂಘಕ್ಕೆ ಗುಣಮಟ್ಟದ ಹಾಲು ಪೂರೈಸಿದರೆ ಸಂಘವನ್ನು ಮುನ್ನಡೆಸಲು ಸಾಧ್ಯ ಎಂದು ಸಂಘದ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ತಿಳಿಸಿದರು.

ಅವರು ಹುಲ್ಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಮತ್ತು 2025-2026ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.
ಸಂಘವು 2024-25ನೇ ಸಾಲಿನಲ್ಲಿ 5 ಲಕ್ಷ ರೂ.ಹಾಗೂ 2025-26ನೇ ಸಾಲಿನಲ್ಲಿ 18.88 ಲಕ್ಷ ರೂ.ಲಾಭ ಗಳಿಸಿದೆ ಎಂದು ತಿಳಿಸಿದರು.
ಮೈಸೂರು ಜಿಲ್ಲಾ ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಡಾ.ರಮ್ಯಾ ಅವರು ಸಂಘದ ವ್ಯವಹಾರದ ಬಗ್ಗೆ ಮಾಹಿತಿ ನೀಡಿದರು.
ಹೆಚ್ಚು ಹಾಲು ಸರಬರಾಜು ಮಾಡಿದ ಸಂಘದ ಸದಸ್ಯರು ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು. ನಿರ್ದೇಶಕರಾದ ಎಚ್.ಎಸ್.ಬಸವರಾಜು, ಜಿ.ಅಶೋಕ್, ರೇವಣ್ಣ, ರಾಜಮ್ಮ, ಮಂಜುಳಾ, ನಾಗೇಂದ್ರ, ಲಕ್ಷ್ಮಮ್ಮ, ಎನ್.ಮಹೇಶ್, ಪ್ರಭಾರ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ನಂಜುಂಡಸ್ವಾಮಿ, ಸದಸ್ಯರಾದ ಶಿವರಾಮೇಗೌಡ, ಪಾಪಣ್ಣ, ಮಹದೇವಸ್ವಾಮಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net