ದೆಹಲಿಯಲ್ಲಿ ಲಾಠಿ ಪ್ರಹಾರ ಖಂಡಿಸಿ ಮಾನವ ಸರಪಳಿ

 ದೆಹಲಿಯಲ್ಲಿ ಲಾಠಿ ಪ್ರಹಾರ ಖಂಡಿಸಿ ಮಾನವ ಸರಪಳಿ
ದೆಹಲಿಯಲ್ಲಿ ಲಾಠಿ ಪ್ರಹಾರ ಖಂಡಿಸಿ ಮಾನವ ಸರಪಳಿ
Published on
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ, ವಿದ್ಯಾರ್ಥಿ ಹೋರಾಟ ಬೆಂಬಲಿಸಿ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಬುಧವಾರ ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್ ಖಂಡನೀಯ ಹಾಗೂ ಅಮಾನವೀಯ. ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ದಮನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಅಕ್ರಮ ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿ ದಬ್ಬಾಳಿಕೆ ನಡೆಸಿದ. ಇದರಿಂದ ನೂರಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ಕೂಡಲೇ ಸಚಿವ ಧಮೇರ್ಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕು. ಸೋನಂ ವಾಂಗ್ಚುಕ್ ಅವರೊಂದಿಗೆ ಮಾತುಕತೆ ನಡೆಸಿ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಶೋಧಕರು, ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net