ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ : ಆರೋಪಿ ನೇಪಾಳಕ್ಕೆ ಪರಾರಿ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮೈಸೂರು: ಹುಣಸೂರಿನ ಚಿನ್ನದಂಗಡಿಯಲ್ಲಿ ನಡೆದಿದ್ದ ಚಿನ್ನ ದರೋಡೆ ಪ್ರಕರಣ ಸಂಬಂಧ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಪ್ರಮುಖ ಆರೋಪಿ ಪಾಲುಸಿಂಗ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ಆರೋಪಿಯು ನೇಪಾಳದಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆ. ನೇಪಾಳ ಮತ್ತು ಭಾರತದ ಗಡಿ ಭಾಗದಲ್ಲಿ ಸಂಚರಿಸುತ್ತಿರುವ ಮಾಹಿತಿಯಿದೆ. ಪ್ರಮುಖ ಆರೋಪಿ ಸಿಗದ ಕಾರಣ ದರೋಡೆಯಾಗಿರುವ ಚಿನ್ನ ಏನಾಗಿದೆ ಎಂಬುದು ತಿಳಿದಿಲ್ಲ. ಆತನ ಸೆರೆಗೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಜಾರ್ಜುನ ಬಾಲದಂಡಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
173 ಮೊಬೈಲ್‌ಗಳು ಪತ್ತೆ: ಜಿಲ್ಲೆಯಲ್ಲಿ ಮೊಬೈಲ್ ಮೇ ತಿಂಗಳಿನಲ್ಲಿ ಒಟ್ಟು 263 ಜನರು ಮೊಬೈಲ್ ಕಳೆದುಕೊಂಡಿದ್ದರು. ಈ ಕುರಿತು ತನಿಖೆ ನಡೆಸಿದ ಪೊಲೀಸರು 35 ಲಕ್ಷ ರೂ. ಮೌಲ್ಯದ 173 ಮೊಬೈಲ್‌ಗಳನ್ನು ಪತ್ತೆ ಮಾಡಿದ್ದಾರೆ. ಜಿಲ್ಲೆಯಲ್ಲಿ 2024ರಲ್ಲಿ 2475 ಮೊಬೈಲ್‌ಗಳು ಕಳ್ಳತನವಾಗಿದ್ದು, 300 ಮೊಬೈಲ್‌ಗಳು ಪತ್ತೆಯಾಗಿವೆ. 2025ರಲ್ಲಿ 2530 ಮೊಬೈಲ್‌ಗಳು ಕಳ್ಳತನವಾಗಿದ್ದು, 372 ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ. 2026ರಲ್ಲಿ ಇದುವರೆಗೂ 1075 ಮೊಬೈಲ್‌ಗಳು ಕಳುವಾಗಿದ್ದು, ಈ ಪೈಕಿ 445 ಮೊಬೈಲ್‌ಗಳನ್ನು ಬೇರೆಯವರು ಬಳಸುತ್ತಿರುವ ಸಂಗತಿ ಪತ್ತೆ ಹಚ್ಚಿ, 283 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net