ಹುಣಸೂರು ತಾಲೂಕಿನ ಪ್ರಗತಿಪರ ಗಾಣಿಗರ ವೇದಿಕೆ ಅಧ್ಯಕ್ಷರಾಗಿ ನಂಜಾಪುರ ಮನು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿ ಪ್ರಸಾದ್, ರಮೇಶ್ ಇತರರಿದ್ದರು.
Published on:
Copied
Follow Us
ಹುಣಸೂರು: ತಾಲೂಕು ಪ್ರಗತಿಪರ ಗಾಣಿಗರ ವೇದಿಕೆ ಅಸ್ತಿತ್ವಕ್ಕೆ ಬಂದಿದ್ದು, ನಂಜಾಪುರ ಮನು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶಿವಜ್ಯೋತಿನಗರ, ಗೌರವಾಧ್ಯಕ್ಷರಾಗಿ ರಮೇಶ್, ಪುಟ್ಟಶೆಟ್ಟಿ ಆಯ್ಕೆಯಾಗಿದ್ದು, ಶೀಘ್ರದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಪ್ರಸಾದ್ ಪತ್ರಿಕೆಗೆ ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ವೇದಿಕೆ ಅಧ್ಯಕ್ಷ ನಂಜಾಪುರ ಮನು, ತಾಲೂಕಿನ ಗಾಣಿಗ ಸಮಾಜದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.70ಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಹುಣಸೂರು ತಾಲೂಕಿನ ನಗರ ಮತ್ತು ಗ್ರಾಮಾಂತರ ನಿವಾಸಿಗಳಾಗಿರಬೇಕು. ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಅಂಕಪಟ್ಟಿ ಶಾಲಾ ಮುಖ್ಯಶಿಕ್ಷಕರು ಅಥವಾ ಪ್ರಾಂಶುಪಾಲರಿಂದ ದೃಢೀಕರಿಸಿ ಮೇ 25ರೊಳಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.